ಯೆಶಾಯ Chapter 43

For English

Read ಯೆಶಾಯ Chapter 43 Online

Read ಯೆಶಾಯ Chapter 43 online from the Holy Bible. This chapter is part of the Book of ಯೆಶಾಯ in the Old Testament. Browse every verse with easy chapter navigation, continue to the next chapter, or explore the complete Book of ಯೆಶಾಯ and the Holy Bible online.

Choose a Chapter

A+ A A-

ಯೆಶಾಯ 43

ಅಧ್ಯಾಯ 43

1. ಈಗಲಾದರೋ ಓ ಯಾಕೋಬೇ, ಇಸ್ರಾಯೇಲೇ ನಿನ್ನನ್ನು ಸೃಷ್ಟಿಸಿದಾತನೂ ರೂಪಿಸಿದಾತನೂ ಆದ ಕರ್ತನು ಇಂತೆನ್ನುತ್ತಾನೆ–ಹೆದರಬೇಡ, ನಾನು ನಿನ್ನನ್ನು ವಿಮೋಚಿಸಿದೆನಲ್ಲಾ ನಿನ್ನ ಹೆಸರು ಹಿಡಿದು ಕರೆದೆನಲ್ಲಾ; ನೀನು ನನ್ನವನೇ.

2. ನೀನು ಜಲರಾಶಿಯನ್ನು ದಾಟಿ ಹೋಗುವಾಗ ನಾನು ನಿನ್ನೊಂದಿಗಿರುವೆನು; ನದಿಗಳನ್ನು ನೀನು ದಾಟುವಾಗ ಅವು ನಿನ್ನನ್ನು ಮುಳುಗಿಸುವದಿಲ್ಲ; ಬೆಂಕಿಯಲ್ಲಿ ನೀನು ನಡೆಯುವಾಗ ಸುಡಲ್ಪಡುವದಿಲ್ಲ; ಇಲ್ಲವೆ ಜ್ವಾಲೆಯು ನಿನ್ನನ್ನು ದಹಿಸದು.

3. ನಾನೇ ನಿನ್ನ ಕರ್ತನೂ ದೇವರೂ ಇಸ್ರಾಯೇಲಿನ ಪರಿಶುದ್ಧನೂ ರಕ್ಷಕನೂ ಆಗಿದ್ದೇನೆ. ಐಗುಪ್ತವನ್ನು ನಿನ್ನ ವಿಮೋಚನೆಗೂ ಇಥಿಯೋಪ್ಯ ಮತ್ತು ಸೆಬಾ ಸೀಮೆಗಳನ್ನು ನಿನಗೊಸ್ಕರ ಕೊಟ್ಟಿದ್ದೇನೆ.

4. ನೀನು ನನ್ನ ದೃಷ್ಟಿಯಲ್ಲಿ ಅಮೂಲ್ಯನೂ ಮಾನ್ಯನೂ ಪ್ರಿಯನೂ ಆಗಿರುವದರಿಂದ ನಾನು ನಿನಗೋಸ್ಕರ ಮನುಷ್ಯರನ್ನೂ ನಿನ್ನ ಪ್ರಾಣಕ್ಕೆ (ಪ್ರತಿಯಾಗಿ) ಜನಾಂಗಗಳನ್ನೂ ಕೊಡುವೆನು.

5. ಭಯಪಡಬೇಡ; ನಾನೇ ನಿನ್ನೊಂದಿಗೆ ಇದ್ದೇನೆ; ನಿನ್ನ ಸಂತತಿಯವರನ್ನು ಮೂಡಣದಿಂದ ತರುವೆನು; ಪಶ್ಚಿಮದಿಂದ ನಿನ್ನನ್ನು ಕೂಡಿಸುವೆನು.

6. ನಾನು–ಒಪ್ಪಿಸಿಬಿಡು ಎಂದು ಉತ್ತರಕ್ಕೆ ತಡೆಯಬೇಡ ಎಂದು ದಕ್ಷಿಣಕ್ಕೆ ಹೇಳಿ, ದೂರದಲ್ಲಿರುವ ನನ್ನ ಕುಮಾರರನ್ನು ಭೂಮಿಯ ಅಂತ್ಯದಿಂದ ನನ್ನ ಕುಮಾರ್ತೆಯರನ್ನು

7. ನನ್ನ ಹೆಸರಿ ನಿಂದ ಕರೆಯಲ್ಪಟ್ಟ ಪ್ರತಿಯೊಬ್ಬನನ್ನೂ ಬರಮಾಡು ವೆನು; ಅವನನ್ನು ನನ್ನ ಮಹಿಮೆಗಾಗಿ ಸೃಷ್ಟಿಸಿದ್ದೇನೆ, ನಾನು ಅವನನ್ನು ನಿರ್ಮಿಸಿದ್ದೇನೆ: ಹೌದು, ನಾನು ಅವನನ್ನು ಉಂಟುಮಾಡಿದ್ದೇನೆ.

8. ಕಣ್ಣಿದ್ದರೂ ಕುರುಡರಾದ, ಕಿವಿಯಿದ್ದರೂ ಕಿವುಡ ರಾದ ಜನರನ್ನು ಕರೆ.

9. ಎಲ್ಲಾ ಜನಾಂಗಗಳು ಒಟ್ಟಿಗೆ ಕೂಡಿಕೊಳ್ಳಲಿ, ಎಲ್ಲಾ ಜನರೂ ಸೇರಿಕೊಳ್ಳಲಿ. ಅವರಲ್ಲಿ ಇದನ್ನು ಪ್ರಕಟಿಸುವವರೂ ಹಿಂದಿನವು ಗಳನ್ನು ನಮಗೆ ತೋರಿಸುವವರು ಯಾರು? ನಾವು ನೀತಿವಂತರೆಂದು ಸ್ಥಾಪಿಸಿಕೊಳ್ಳುವದಕ್ಕೆ ಸಾಕ್ಷಿಗಳನ್ನು ಕರತರಲಿ; ಆ ಸಾಕ್ಷಿಗಳು ಇದನ್ನು ಕೇಳಿ ನಿಜವೆಂದು ಹೇಳಲಿ.

10. ಕರ್ತನು ಹೇಳುವದೇನಂದರೆ–ನೀವು ನನ್ನ ಸಾಕ್ಷಿಗಳಾಗಿದ್ದೀರಿ; ನಾನೇ ಆತನೆಂದು ನೀವು ತಿಳಿದು ನಂಬಿ ಗ್ರಹಿಸುವ ಹಾಗೆಯೇ ನಾನು ನಿನ್ನನ್ನು ಸೇವಕನನ್ನಾಗಿ ಆರಿಸಿಕೊಂಡಿದ್ದೇನೆ. ನನಗಿಂತ ಮುಂಚೆ ಯೂ ನನ್ನ ನಂತರದಲ್ಲಿಯೂ ಯಾವ ದೇವರೂ ಇರಲಿಲ್ಲ.

11. ನಾನೇ, ನಾನೇ, ಕರ್ತನಾಗಿದ್ದೇನೆ, ನನ್ನ ಹೊರತು ಯಾವ ರಕ್ಷಕನೂ ಇಲ್ಲ.

12. ನಿಮ್ಮಲ್ಲಿ ಅನ್ಯದೇವರು ಇಲ್ಲದಿರುವಾಗಲೇ ನಾನೇ ರಕ್ಷಣೆ ಯನ್ನು ಪ್ರಕಟಿಸಿ ತೋರಿಸಿದ್ದೇನೆ; ಆದದರಿಂದ ನೀವು ನನ್ನ ಸಾಕ್ಷಿಗಳು; ನಾನೇ ದೇವರೆಂದು ಕರ್ತನು ನುಡಿಯು ತ್ತಾನೆ.

13. ಹೌದು, ಅಂದಿನಿಂದಲೇ ನಾನಿದ್ದೇನೆ; ನನ್ನ ಕೈಯಿಂದ ಬಿಡಿಸುವವರು ಯಾರೂ ಇಲ್ಲ; ನನ್ನ ಕೆಲಸಕ್ಕೆ ಅಡ್ಡಿ ಬರುವವನಾರು?

14. ನಿಮ್ಮ ವಿಮೋಚಕನೂ ಇಸ್ರಾಯೇಲಿನ ಪರಿ ಶುದ್ಧನೂ ಆಗಿರುವ ಕರ್ತನು ಇಂತೆನ್ನುತ್ತಾನೆ–ನಾನು ನಿಮಗೋಸ್ಕರ ಬಾಬೆಲಿಗೆ ಕಳುಹಿಸಿ ಅವರ ಘನ ವಂತರನ್ನೆಲ್ಲಾ ಮತ್ತು ಹಡಗುಗಳಲ್ಲಿ ಆರ್ಭಟಿಸುವ ಕಸ್ದೀಯರನ್ನು ತಗ್ಗಿಸಿದೆನು.

15. ನಾನು ಕರ್ತನಾದ ನಿಮ್ಮ ಪರಿಶುದ್ದನೂ ಇಸ್ರಾಯೇಲನ್ನು ಸೃಷ್ಟಿಸಿದವನೂ ನಿಮ್ಮ ಅರಸನೂ ಆಗಿದ್ದೇನೆ.

16. ಯಾವಾತನು ಸಮುದ್ರ ದಲ್ಲಿ ದಾರಿಮಾಡಿ ಜಲಪ್ರವಾಹಗಳಲ್ಲಿ ಮಾರ್ಗವನ್ನು ಏರ್ಪಡಿಸಿದನೋ.

17. ಯಾವಾತನು ರಥ ಕುದುರೆ ಗಳ ದಂಡನ್ನು ಪರಾಕ್ರಮರಾದವರನ್ನು ಹೊರಡಿಸಿ ಅವು ಒಟ್ಟಿಗೆ ಬಿದ್ದು ಏಳಲಾರದಂತೆಯೂ ದೀಪದೋ ಪಾದಿಯಲ್ಲಿ ನಂದಿ ಆರಿಹೋಗುವಂತೆಯೂ ಮಾಡಿ ದನೋ ಆ ಕರ್ತನು ಇಂತೆನ್ನುತ್ತಾನೆ–

18. ಹಿಂದಿನ ಸಂಗತಿಗಳನ್ನು ಜ್ಞಾಪಕಕ್ಕೆ ತಂದುಕೊಳ್ಳಬೇಡಿರಿ; ಇಲ್ಲವೆ ಹಳೇ ಸಂಗತಿಗಳನ್ನು ಯೋಚಿಸಬೇಡಿರಿ.

19. ಇಗೋ, ನಾನು ಒಂದು ಹೊಸ ಕಾರ್ಯವನ್ನು ಮಾಡುವೆನು, ಅದು ಈಗಲೇ ಮೊಳೆತು ಬರುವದು; ನಿಮಗೆ ಅದು ತಿಳಿದಿಲ್ಲವೋ? ನಾನು ಅರಣ್ಯದಲ್ಲಿ ಮಾರ್ಗವನ್ನು ಮರುಭೂಮಿಯಲ್ಲಿ ನದಿಗಳನ್ನು ಸಹ ಉಂಟುಮಾಡು ವೆನು.

20. ಅಡವಿಯ ಮೃಗಗಳು, ಘಟಸರ್ಪಗಳು ಮತ್ತು ಗೂಬೆಗಳು ನನ್ನನ್ನು ಸನ್ಮಾನಿಸುತ್ತವೆ. ಅಡವಿಯ ನೀರನ್ನು ಮರುಭೂಮಿಯಲ್ಲಿ ನದಿಗಳನ್ನು ನಾನು ಆರಿ ಸಿಕೊಂಡ ನನ್ನ ಪ್ರಜೆಗಳಿಗೆ ಕುಡಿಯುವದಕ್ಕೆ ಕೊಟ್ಟೆನು.

21. ನನ್ನ ಸ್ತೋತ್ರವನ್ನು ಪ್ರಚುರಪಡಿಸಲಿ ಎಂದು ನಾನು ಈ ಜನರನ್ನು ನನಗೋಸ್ಕರ ರೂಪಿಸಿದ್ದೇನೆ.

22. ಆದರೂ ಓ ಯಾಕೋಬೇ, ನೀನು ನನ್ನನ್ನು ಪ್ರಾರ್ಥಿಸಲಿಲ್ಲ; ಓ ಇಸ್ರಾಯೇಲೇ, ನನ್ನ ವಿಷಯದಲ್ಲಿ ನೀನು ಬೇಸರಗೊಂಡಿದ್ದೀ!

23. ನಿನ್ನ ದಹನಬಲಿಯ ಎಳೇ ಕರುಗಳನ್ನು ನನಗೆ ತರಲಿಲ್ಲ ಇಲ್ಲವೆ ನಿನ್ನ ಯಜ್ಞ ಗಳಿಂದ ನನ್ನನ್ನು ಸನ್ಮಾನಿಸಲಿಲ್ಲ; ನೀನು ಕಾಣಿಕೆಯನ್ನು ಅರ್ಪಿಸದೆ ಇದ್ದದ್ದಕ್ಕೆ ನಾನು ಕಾರಣವಲ್ಲ, ಇಲ್ಲವೆ ಧೂಪಕ್ಕಾಗಿ ನಿನ್ನನ್ನು ಬೇಸರಗೊಳಿಸಲಿಲ್ಲ.

24. ನೀನು ನನಗೋಸ್ಕರ ಹಣದಿಂದ ಗಂಧಕಾಷ್ಟವನ್ನು ಕೊಂಡು ಕೊಳ್ಳಲಿಲ್ಲ ಇಲ್ಲವೆ ನಿನ್ನ ಯಜ್ಞಪಶುಗಳ ಕೊಬ್ಬಿನಿಂದ ನನ್ನನ್ನು ತೃಪ್ತಿಪಡಿಸಲಿಲ್ಲ. ಆದರೆ ನಿನ್ನ ಪಾಪಗಳಿಂದ ನನ್ನನ್ನು ತೊಂದರೆಗೊಳಿಸಿದ್ದೀ, ಅಕ್ರಮಗಳಿಂದ ನನ್ನನು ಬೇಸರಗೊಳಿಸಿದ್ದೀ.

25. ನಾನಾಗಿ ನಾನೇ ನನಗೋಸ್ಕರ ನಿನ್ನ ದ್ರೋಹಗಳನ್ನು ಅಳಿಸಿಬಿಡುತ್ತೇನೆ. ನಿನ್ನ ಪಾಪ ಗಳನ್ನು ನನ್ನ ನೆನಪಿನಲ್ಲಿಡೆನು.

26. ನನಗೆ ಜ್ಞಾಪಕ ಪಡಿಸು, ನಾವಿಬ್ಬರೂ ವಾದಿಸುವಾ, ನೀನು ನೀತಿವಂತ ನೆಂದು ಪ್ರಚುರಪಡಿಸು.

27. ನಿನ್ನ ಮೂಲಪಿತೃ ಪಾಪ ಮಾಡಿದ್ದಾನೆ, ಬೋಧಕರು ನನಗೆ ವಿರೋಧವಾಗಿ ದ್ರೋಹಮಾಡಿದ್ದಾರೆ.

28. ಆದಕಾರಣ ಪರಿಶುದ್ಧ ಸ್ಥಾನದ ಪ್ರಧಾನರನ್ನು ಅಪವಿತ್ರಮಾಡಿ, ಯಾಕೋ ಬನ್ನು ಶಾಪಕ್ಕೂ, ಇಸ್ರಾಯೇಲನ್ನು ದೂಷಣೆಗಳಿಗೂ ಒಪ್ಪಿಸಿಬಿಟ್ಟಿದ್ದೇನೆ.

About ಯೆಶಾಯ Chapter 43

Read ಯೆಶಾಯ Chapter 43 online from the Holy Bible. This chapter is part of the Book of ಯೆಶಾಯ in the Old Testament. Continue reading with the chapter navigation above or explore the complete book.

Book Information

Book: ಯೆಶಾಯ
Chapter: 43
Testament: Old Testament

How to Read this Chapter

Use the Previous and Next Chapter buttons to continue reading ಯೆಶಾಯ. You can also adjust the font size for comfortable reading and browse other books of the Bible using the navigation links.

https://www.youtube.com/watch?v=rzsT_Q3KLzE

More Resources

Continue Reading the Bible

Continue reading ಯೆಶಾಯ Chapter 43 and explore every book, chapter and verse of the Holy Bible. Use the navigation links above and below to move through the Scriptures with ease.

Frequently Asked Questions

What is ಯೆಶಾಯ Chapter 43?

ಯೆಶಾಯ Chapter 43 is part of the Book of ಯೆಶಾಯ in the Holy Bible.

Can I read this chapter online?

Yes. You can read the complete ಯೆಶಾಯ Chapter 43 online for free with easy chapter navigation.

Share Your Love

Leave a Reply

Your email address will not be published. Required fields are marked *