ಕೀರ್ತನೆಗಳು Chapter 73

For English

Read ಕೀರ್ತನೆಗಳು Chapter 73 Online

Read ಕೀರ್ತನೆಗಳು Chapter 73 online from the Holy Bible. This chapter is part of the Book of ಕೀರ್ತನೆಗಳು in the Old Testament. Browse every verse with easy chapter navigation, continue to the next chapter, or explore the complete Book of ಕೀರ್ತನೆಗಳು and the Holy Bible online.

Choose a Chapter

ಕೀರ್ತನೆಗಳು 73

ಅಧ್ಯಾಯ 73

1. ನಿಜವಾಗಿ ದೇವರು ಇಸ್ರಾಯೇಲಿಗೂ ಶುದ್ಧ ಹೃದಯದವರಿಗೂ ಒಳ್ಳೆಯವನು.

2. ನನ್ನ ಪಾದಗಳ ಮಟ್ಟಿಗಾದರೋ ಅವು ತಪ್ಪುವ ಹಾಗಿದ್ದವು, ನನ್ನ ಹೆಜ್ಜೆಗಳು ಜಾರುವದಕ್ಕೆ ಬಹು ಸವಿಾಪವಾಗಿದ್ದವು.

3. ದುಷ್ಟರ ಅಭಿವೃದ್ಧಿಯನ್ನು ನೋಡಿದಾಗ ಮೂರ್ಖರ ಮೇಲೆ ಹೊಟ್ಟೇಕಿಚ್ಚು ಪಟ್ಟೆನು.

4. ಅವರ ಮರಣಕ್ಕೆ ಬಂಧನಗಳು ಇಲ್ಲ; ಅವರ ತ್ರಾಣವು ಸ್ಥಿರವಾಗಿದೆ.

5. ಬೇರೆ ಮನುಷ್ಯರಂತೆ ಅವರು ಕಷ್ಟದಲ್ಲಿಲ್ಲ. ಇಲ್ಲವೆ ಬೇರೆ ಮನುಷ್ಯರ ಹಾಗೆ ಅವರಿಗೆ ವ್ಯಾಧಿಯೂ ಇಲ್ಲ;

6. ಆದದರಿಂದ ಗರ್ವವು ಅವರಿಗೆ ಕಂಠಮಾಲೆಯಂತೆ ಅವರನ್ನು ಸುತ್ತಿದೆ, ಬಲಾತ್ಕಾರವು ಅವರನ್ನು ಬಟ್ಟೆಯ ಹಾಗೆ ಮುಚ್ಚುತ್ತದೆ.

7. ಅವರ ಕಣ್ಣುಗಳು ಕೊಬ್ಬಿನಿಂದ ಉಬ್ಬಿಕೊಂಡಿರುತ್ತವೆ; ಅವರ ಹೃದಯವು ಆಶಿಸುವದಕ್ಕಿಂತಲೂ ಹೆಚ್ಚಾಗಿ ಅವರಿಗೆ ಇವೆ.

8. ಅವರು ಕೆಟ್ಟುಹೋದವರು. ಸಂಕಟ ಪಡುವವರ ವಿಷಯ ಕೆಟ್ಟದ್ದಾಗಿಯೂ ಗರ್ವದಿಂದಲೂ ಮಾತನಾಡುತ್ತಾರೆ.

9. ಪರಲೋಕಕ್ಕೆ ವಿರೋಧವಾಗಿ ತಮ್ಮ ಬಾಯನ್ನು ತೆರೆದಿದ್ದಾರೆ; ಭೂಲೋಕದಲ್ಲೆಲ್ಲಾ ಅವರ ಮಾತೇ ನಡೆಯುವದು.

10. ಆದದರಿಂದ ಅವನ ಜನರು ಇಲ್ಲಿಗೆ ತಿರುಗಿ ಕೊಳ್ಳುತ್ತಾರೆ; ಅವರಿಗೆ ಪಾನವು ಯಥೇಚ್ಚವಾಗಿ ದೊರೆಯುತ್ತದೆ.

11. ಅವರು– ದೇವರು ಹೇಗೆ ಬಲ್ಲನು? ಮಹೋನ್ನತನಲ್ಲಿ ತಿಳುವಳಿಕೆ ಉಂಟೋ ಎಂದು ಅಂದುಕೊಳ್ಳುತ್ತಾರೆ.

12. ಇಗೋ, ಇಹಲೋಕದಲ್ಲಿ ವೃದ್ಧಿಯಾಗುವ ದುಷ್ಟರು ಇವರೇ, ಐಶ್ವರ್ಯದಲ್ಲಿ ಇವರು ಹೆಚ್ಚುತ್ತಾರೆ.

13. ನಿಶ್ಚಯವಾಗಿ ನನ್ನ ಹೃದಯವನ್ನು ವ್ಯರ್ಥವಾಗಿ ನಿರ್ಮಲ ಮಾಡಿಕೊಂಡು ನನ್ನ ಕೈಗಳನ್ನು ನಿರಪರಾಧ ದಲ್ಲಿ ತೊಳೆದಿದ್ದೇನೆ.

14. ನಾನು ದಿನವೆಲ್ಲಾ ವ್ಯಾಧಿ ಪೀಡಿತನಾಗಿದ್ದೇನೆ; ಪ್ರತಿ ಉದಯದಲ್ಲಿ ನನಗೆ ಶಿಕ್ಷೆ ಯಾಯಿತು.

15. ಹೀಗೆ ನಾನು ಮಾತನಾಡುವೆನೆಂದು ಹೇಳಿದರೆ, ಇಗೋ, ನಿನ್ನ ಮಕ್ಕಳ ವಂಶಕ್ಕೆ ವಿರೋಧ ವಾಗಿ ಆತಂಕ ಮಾಡುವೆನು.

16. ಇದನ್ನು ತಿಳಿಯು ವದಕ್ಕೆ ನಾನು ಯೋಚಿಸಿದಾಗ, ನಾನು ದೇವರ ಪರಿಶುದ್ಧ ಸ್ಥಳಗಳಿಗೆ ಬರುವ ವರೆಗೆ

17. ಅದು ನನ್ನ ದೃಷ್ಟಿಗೆ ಕಷ್ಟವಾಗಿತ್ತು. ಅವರ ಅಂತ್ಯವನ್ನು ಗ್ರಹಿಸಿ ಕೊಂಡೆನು.

18. ನಿಶ್ಚಯವಾಗಿ ನೀನು ಅವರನ್ನು ಜಾರುವ ಸ್ಥಳಗಳಲ್ಲಿ ಇಟ್ಟಿದ್ದೀ; ಅವರನ್ನು ನಾಶನಕ್ಕೆ ಕೆಳಗೆ ದೊಬ್ಬಿದ್ದೀ.

19. ಕ್ಷಣಮಾತ್ರದಲ್ಲಿ ಹೀಗೆ ನಾಶನಕ್ಕೆ ಅವರನ್ನು ಬರಮಾಡಿದಿ. ಅವರು ದಿಗಿಲುಗಳಿಂದ ಸಂಪೂರ್ಣವಾಗಿ ನಾಶವಾಗಿದ್ದಾರೆ.

20. ಎಚ್ಚತ್ತ ಮೇಲೆ ಕನಸು ಹೇಗೋ ಹಾಗೆಯೇ ಓ ಕರ್ತನೇ, ನೀನು ಎಚ್ಚರವಾದಾಗ ಅವರ ರೂಪವನ್ನು ತಿರಸ್ಕರಿಸುವಿ.

21. ಹೀಗೆ ನನ್ನ ಹೃದಯವು ವ್ಯಥೆಗೊಂಡಾಗ ನನ್ನ ಅಂತರಿಂದ್ರಿಯಗಳಿಗೆ ತಿವಿಯಲ್ಪಟ್ಟವು.

22. ಆಗ ನಾನು ಮೂರ್ಖನಾಗಿ ಏನೂ ತಿಳಿಯದೆ ನಿನ್ನ ಮುಂದೆ ಪಶು ವಿನಂತೆ ಇದ್ದೆನು.

23. ಆದಾಗ್ಯೂ ನಾನು ನಿನ್ನ ಸಂಗಡ ಯಾವಾಗಲೂ ಇದ್ದೇನೆ; ನೀನು ನನ್ನ ಬಲಗೈಯನ್ನು ಹಿಡಿದಿದ್ದೀ.

24. ನಿನ್ನ ಆಲೋಚನೆಯಂತೆ ನನ್ನನ್ನು ನಡಿಸಿದ ತರು ವಾಯ ಮಹಿಮೆಗೆ ನನ್ನನ್ನು ಅಂಗೀಕರಿಸುವಿ.

25. ಪರ ಲೋಕದಲ್ಲಿ ನನಗೆ ನೀನಲ್ಲದೆ ಮತ್ತಾರಿದ್ದಾರೆ? ನಿನ್ನ ಹೊರತಾಗಿ ಭೂಮಿಯಲ್ಲಿ ನಾನು ಅಪೇಕ್ಷಿಸುವವರು ಯಾರೂ ಇಲ್ಲ.

26. ನನ್ನ ಮಾಂಸವೂ ಹೃದಯವೂ ಕುಂದುತ್ತದೆ; ಆದರೆ ದೇವರು ಯುಗಯುಗಕ್ಕೂ ನನ್ನ ಹೃದಯದ ಬಲವೂ ಪಾಲೂ ಆಗಿದ್ದಾನೆ.

27. ಇಗೋ, ನಿನಗೆ ದೂರವಾಗಿರುವವರು ನಾಶವಾಗುವರು, ನಿನ್ನನ್ನು ಬಿಟ್ಟು ಜಾರತ್ವ ಮಾಡುವವರೆಲ್ಲ ರನ್ನು ಸಂಹರಿಸಿದ್ದೀ.

28. ನನಗಾದರೋ ದೇವರ ಸವಿಾಪಕ್ಕೆ ಬರುವದೇ ಒಳ್ಳೇದಾಗಿದೆ; ನಿನ್ನ ಕ್ರಿಯೆ ಗಳನ್ನೆಲ್ಲಾ ಸಾರುವದಕ್ಕೆ ಕರ್ತನಾದ ದೇವರಲ್ಲಿ ನನ್ನ ಭರವಸವನ್ನು ಇಟ್ಟಿದ್ದೇನೆ.

About ಕೀರ್ತನೆಗಳು Chapter 73

Read ಕೀರ್ತನೆಗಳು Chapter 73 online from the Holy Bible. This chapter is part of the Book of ಕೀರ್ತನೆಗಳು in the Old Testament. Continue reading with the chapter navigation above or explore the complete book.

Book Information

Book: ಕೀರ್ತನೆಗಳು
Chapter: 73
Testament: Old Testament

How to Read this Chapter

Use the Previous and Next Chapter buttons to continue reading ಕೀರ್ತನೆಗಳು. You can also adjust the font size for comfortable reading and browse other books of the Bible using the navigation links.

https://www.youtube.com/watch?v=rzsT_Q3KLzE

More Resources

Continue Reading the Bible

Continue reading ಕೀರ್ತನೆಗಳು Chapter 73 and explore every book, chapter and verse of the Holy Bible. Use the navigation links above and below to move through the Scriptures with ease.

Frequently Asked Questions

What is ಕೀರ್ತನೆಗಳು Chapter 73?

ಕೀರ್ತನೆಗಳು Chapter 73 is part of the Book of ಕೀರ್ತನೆಗಳು in the Holy Bible.

Can I read this chapter online?

Yes. You can read the complete ಕೀರ್ತನೆಗಳು Chapter 73 online for free with easy chapter navigation.

More Chapters from ಕೀರ್ತನೆಗಳು

  1. ಕೀರ್ತನೆಗಳು Chapter 147
  2. ಕೀರ್ತನೆಗಳು Chapter 54
  3. ಕೀರ್ತನೆಗಳು Chapter 5
  4. ಕೀರ್ತನೆಗಳು Chapter 118
  5. ಕೀರ್ತನೆಗಳು Chapter 92
  6. ಕೀರ್ತನೆಗಳು Chapter 44
  7. ಕೀರ್ತನೆಗಳು Chapter 32

Explore More from ಹಳೆಯ ಒಡಂಬಡಿಕೆ

  1. ಧರ್ಮೋಪದೇಶಕಾಂಡ Chapter 29
  2. ಆದಿಕಾಂಡ Chapter 7
  3. ಯೆಶಾಯ Chapter 18
  4. ನ್ಯಾಯಸ್ಥಾಪಕರು Chapter 11
  5. ಹೋಶೇ Chapter 5
  6. ಯೆಶಾಯ Chapter 10
  7. ಯೆರೆಮೀಯ Chapter 51

Related Chapters & Readings

  1. ಯೆಹೆಜ್ಕೇಲನು Chapter 18
  2. 1 ಥೆಸಲೊನೀಕದವರಿಗೆ Chapter 4
  3. ಯೆರೆಮೀಯ Chapter 1
  4. ಯೋಹಾನನು Chapter 12
  5. ಅರಣ್ಯಕಾಂಡ Chapter 32
  6. ಯೆಶಾಯ Chapter 43
  7. ಯಾಜಕಕಾಂಡ Chapter 15
Share Your Love

Leave a Reply

Your email address will not be published. Required fields are marked *