ಆದಿಕಾಂಡ Chapter 37

For English

Read ಆದಿಕಾಂಡ Chapter 37 Online

Read ಆದಿಕಾಂಡ Chapter 37 online from the Holy Bible. This chapter is part of the Book of ಆದಿಕಾಂಡ in the Old Testament. Browse every verse with easy chapter navigation, continue to the next chapter, or explore the complete Book of ಆದಿಕಾಂಡ and the Holy Bible online.

Choose a Chapter

ಆದಿಕಾಂಡ 37

ಅಧ್ಯಾಯ 37

1. ಯಾಕೋಬನು ತನ್ನ ತಂದೆ ಪ್ರವಾಸಿಯಾಗಿದ್ದ ಕಾನಾನ್‌ ದೇಶದಲ್ಲಿ ವಾಸ ವಾಗಿದ್ದನು.

2. ಇವು ಯಾಕೋಬನ ವಂಶಾವಳಿಗಳು: ಯೋಸೇಫನು ಹದಿನೇಳು ವರುಷದವನಾಗಿದ್ದಾಗ ತನ್ನ ಸಹೋದರರ ಸಂಗಡ ಮಂದೆಯನ್ನು ಮೇಯಿಸು ತ್ತಿದ್ದನು. ಆ ಹುಡುಗನು ತನ್ನ ತಂದೆಯ ಹೆಂಡತಿ ಯರಾಗಿದ್ದ ಬಿಲ್ಹಳ ಮತ್ತು ಜಿಲ್ಪಳ ಕುಮಾರರ ಸಂಗಡ ಇದ್ದನು. ಯೋಸೇಫನು ಅವರ ಕೆಟ್ಟತನದ ಸುದ್ದಿಯನ್ನು ತನ್ನ ತಂದೆಗೆ ತಿಳಿಸುತ್ತಿದ್ದನು.

3. ಆದರೆ ಯೋಸೇಫನು ಇಸ್ರಾಯೇಲನಿಗೆ ಮುಪ್ಪಿನಲ್ಲಿ ಹುಟ್ಟಿದ ಮಗನಾಗಿ ದ್ದರಿಂದ ಅವನು ತನ್ನ ಎಲ್ಲಾ ಮಕ್ಕಳಿಗಿಂತ ಅವನನ್ನು ಹೆಚ್ಚು ಪ್ರೀತಿಮಾಡಿ ಅವನಿಗೆ ಅನೇಕ ಬಣ್ಣದ ಅಂಗಿ ಯನ್ನು ಮಾಡಿಸಿದನು.

4. ತಮ್ಮ ತಂದೆಯು ಅವನನ್ನು ಅವನ ಎಲ್ಲಾ ಸಹೋದರರಿಗಿಂತ ಹೆಚ್ಚು ಪ್ರೀತಿ ಮಾಡುತ್ತಾನೆಂದು ಅವನ ಸಹೋದರರು ನೋಡಿ ಅವನನ್ನು ದ್ವೇಷಿಸಿ ಅವನ ಸಂಗಡ ಸಮಾಧಾನವಾಗಿ ಮಾತಾಡಲಾರದೆ ಇದ್ದರು.

5. ಯೋಸೇಫನು ಒಂದು ಕನಸನ್ನು ಕಂಡು ತನ್ನ ಸಹೋದರರಿಗೆ ತಿಳಿಸಿದಾಗ ಅವರು ಅವನನ್ನು ಇನ್ನೂ ಹೆಚ್ಚಾಗಿ ದ್ವೇಷಿಸಿದರು.

6. ಅವನು ಅವರಿಗೆ ನಾನು ಕಂಡ ಈ ಕನಸನ್ನು ಹೇಳುತ್ತೇನೆ, ಕೇಳಿರಿ.

7. ಇಗೋ, ನಾವು ಹೊಲದಲ್ಲಿ ಸಿವುಡುಗಳನ್ನು ಕಟ್ಟುತ್ತಾ ಇದ್ದೆವು; ಆಗ ಇಗೋ, ನನ್ನ ಸಿವುಡು ಎದ್ದು ನಿಂತಿತು; ಆಗ ಇಗೋ, ನಿಮ್ಮ ಸಿವುಡುಗಳು ತಿರುಗಿ ಕೊಂಡು ನನ್ನ ಸಿವುಡಿಗೆ ಅಡ್ಡಬಿದ್ದವು ಅಂದನು.

8. ಆಗ ಅವನ ಸಹೋದರರು ಅವನಿಗೆ–ನೀನು ನಮ್ಮನ್ನು ನಿಶ್ಚಯವಾಗಿಯೂ ಆಳುವಿಯೋ ಇಲ್ಲವೆ ನಿಜವಾಗಿ ನಮ್ಮ ಮೇಲೆ ದೊರೆತನ ಮಾಡುವಿಯೋ ಎಂದು ಹೇಳಿ ಅವನ ಕನಸುಗಳಿಗಾಗಿಯೂ ಅವನ ಮಾತುಗಳಿಗಾಗಿಯೂ ಅವನನ್ನು ಮತ್ತಷ್ಟು ಹಗೆ ಮಾಡಿದರು.

9. ಇದಲ್ಲದೆ ಅವನು ಇನ್ನೊಂದು ಕನಸನ್ನು ಕಂಡು ತನ್ನ ಸಹೋದರರಿಗೆ–ಇಗೋ, ಇನ್ನೊಂದು ಕನಸನ್ನು ಕಂಡಿದ್ದೇನೆ; ಇಗೋ, ಸೂರ್ಯನೂ ಚಂದ್ರನೂ ಹನ್ನೊಂದು ನಕ್ಷತ್ರಗಳೂ ನನಗೆ ಅಡ್ಡಬಿದ್ದವು ಅಂದನು.

10. ಅವನು ತನ್ನ ತಂದೆಗೂ ತನ್ನ ಸಹೋದರರಿಗೂ ಅದನ್ನು ತಿಳಿಸಿದಾಗ ಅವನ ತಂದೆಯು ಅವನನ್ನು ಗದರಿಸಿ ಅವನಿಗೆ–ನೀನು ಕಂಡ ಈ ಕನಸು ಏನು? ನಾನೂ ನಿನ್ನ ತಾಯಿಯೂ ನಿನ್ನ ಸಹೋದರರೂ ನಿಜವಾಗಿ ನಿನ್ನ ಮುಂದೆ ಅಡ್ಡಬೀಳುವದಕ್ಕೆ ಬರಬೇಕೋ ಅಂದನು.

11. ಆಗ ಅವನ ಸಹೋದರರು ಅವನ ಮೇಲೆ ಹೊಟ್ಟೆಕಿಚ್ಚು ಪಟ್ಟರು. ಆದರೆ ಅವನ ತಂದೆ ಆ ಮಾತನ್ನು ಮನಸ್ಸಿನಲ್ಲಿ ಇಟ್ಟುಕೊಂಡನು.

12. ಆಗ ಅವನ ಸಹೋ ದರರು ಶೆಕೆಮಿನಲ್ಲಿ ತಮ್ಮ ತಂದೆಯ ಮಂದೆಯನ್ನು ಮೇಯಿಸುವದಕ್ಕೆ ಹೋದರು.

13. ಆದದರಿಂದ ಇಸ್ರಾಯೇಲನು ಯೋಸೇಫನಿಗೆ–ನಿನ್ನ ಸಹೋದ ರರು ಶೆಕೆಮಿನಲ್ಲಿ ಮಂದೆಯನ್ನು ಮೇಯಿಸುತ್ತಾರಲ್ಲಾ; ಅವರ ಬಳಿಗೆ ನಾನು ನಿನ್ನನ್ನು ಕಳುಹಿಸುತ್ತೇನೆ ಹೋಗು ಅಂದನು. ಅದಕ್ಕೆ ಅವನು–ನಾನು ಇಲ್ಲಿದ್ದೇನೆ ಅಂದನು.

14. ಯಾಕೋಬನು ಅವನಿಗೆ–ಹೋಗಿ ನಿನ್ನ ಸಹೋದರರ ಕ್ಷೇಮಸಮಾಚಾರವನ್ನೂ ಮಂದೆಗಳ ಕ್ಷೇಮಸಮಾಚಾರವನ್ನೂ ತಿಳಿದುಕೊಂಡು ಬಂದು ನನಗೆ ತಿಳಿಸು ಎಂದು ಹೇಳಿ ಹೆಬ್ರೋನ್‌ ತಗ್ಗಿನಿಂದ ಕಳುಹಿಸಿದನು. ಆಗ ಅವನು ಶೆಕೆಮಿಗೆ ಬಂದನು.

15. ಒಬ್ಬಾನೊಬ್ಬ ಮನುಷ್ಯನು ಯೋಸೇಫ ನನ್ನು ಕಂಡಾಗ ಇಗೋ, ಅವನು ಹೊಲದಲ್ಲಿ ಅಲೆಯುತ್ತಿದ್ದನು. ಆ ಮನುಷ್ಯನು ಅವನಿಗೆ–ನೀನು ಏನು ಹುಡುಕುತ್ತೀ ಎಂದು ಕೇಳಿದನು.

16. ಅದಕ್ಕೆ ಅವನು–ನನ್ನ ಸಹೋದರರನ್ನು ಹುಡುಕುತ್ತಿದ್ದೇನೆ; ಅವರು ತಮ್ಮ ಮಂದೆಗಳನ್ನು ಎಲ್ಲಿ ಮೇಯಿಸು ತ್ತಾರೆಂದು ನನಗೆ ಹೇಳು ಎಂದು ಬೇಡಿಕೊಂಡನು.

17. ಆ ಮನುಷ್ಯನು–ಅವರು ಇಲ್ಲಿಂದ ಹೊರಟು ಹೋದರು. ಯಾಕಂದರೆ ಅವರು–ನಾವು ದೋತಾ ನಿಗೆ ಹೋಗೋಣ ಎಂದು ಹೇಳುತ್ತಿದ್ದದ್ದನ್ನು ನಾನು ಕೇಳಿಸಿಕೊಂಡೆನು ಅಂದನು. ಆಗ ಯೋಸೇಫನು ತನ್ನ ಸಹೋದರರನ್ನು ಹುಡಿಕಿಕೊಂಡು ಹೋಗಿ ದೋತಾನಿನಲ್ಲಿ ಅವರನ್ನು ಕಂಡುಕೊಂಡನು.

18. ಅವರು ದೂರದಿಂದ ಅವನನ್ನು ನೋಡಿದಾಗ ಅವನು ಅವರ ಸವಿಾಪಕ್ಕೆ ಬರುವದಕ್ಕೆ ಮುಂಚೆಯೇ ಅವರು ಅವನನ್ನು ಕೊಂದುಹಾಕಬೇಕೆಂದು ಅವ ನಿಗೆ ವಿರೋಧವಾಗಿ ಒಳಸಂಚುಮಾಡಿಕೊಂಡರು.

19. ಅವರು–ಇಗೋ, ಈ ಕನಸಿನವನು ಬರುತ್ತಿದ್ದಾನೆ;

20. ಬನ್ನಿರಿ, ಈಗ ಅವನನ್ನು ಕೊಂದು–ಯಾವದೋ ಒಂದು ಕಾಡುಮೃಗವು ಅವನನ್ನು ತಿಂದುಬಿಟ್ಟಿತೆಂದು ಹೇಳೋಣ; ತರುವಾಯ ಅವನ ಕನಸುಗಳು ಏನಾಗುವವೋ ನೋಡೋಣ ಎಂದು ಒಬ್ಬರಿಗೊಬ್ಬರು ಮಾತನಾಡಿಕೊಂಡರು.

21. ಆದರೆ ರೂಬೇನನು ಅದನ್ನು ಕೇಳಿ ಅವನನ್ನು ಅವರ ಕೈಗಳಿಂದ ತಪ್ಪಿಸಿ–ಅವನನ್ನು ಕೊಲ್ಲುವದು ಬೇಡ ಅಂದನು.

22. ರೂಬೇನನು ಅವನನ್ನು ಅವರ ಕೈಗಳಿಂದ ತಪ್ಪಿಸಿ ತನ್ನ ತಂದೆಯ ಬಳಿಗೆ ತಿರಿಗಿ ಕರೆದುಕೊಂಡು ಹೋಗುವ ಹಾಗೆ ಅವರಿಗೆ–ರಕ್ತ ಚೆಲ್ಲಬೇಡಿರಿ, ಕಾಡಿನಲ್ಲಿರುವ ಈ ತಗ್ಗಿನಲ್ಲಿ ಅವನನ್ನು ಹಾಕಿರಿ; ಆದರೆ ಅವನ ಮೇಲೆ ಕೈಹಾಕಬೇಡಿರಿ ಅಂದನು.

23. ಯೋಸೇಫನು ತನ್ನ ಸಹೋದರರ ಬಳಿಗೆ ಬಂದಾಗ ಅವರು ಯೋಸೇಫನ ಮೇಲಿದ್ದ ಬಣ್ಣದ ಅಂಗಿಯನ್ನು ತೆಗೆದರು.

24. ಅವನನ್ನು ತಕ್ಕೊಂಡು ತಗ್ಗಿನಲ್ಲಿ ಹಾಕಿದರು; ಆ ತಗ್ಗು ನೀರಿಲ್ಲದೆ ಬರಿದಾಗಿತ್ತು.

25. ಅವರು ಊಟಕ್ಕೆ ಕೂತುಕೊಂಡಾಗ ತಮ್ಮ ಕಣ್ಣುಗಳನ್ನೆತ್ತಿ ನೋಡಲಾಗಿ ಇಗೋ, ಇಷ್ಮಾಯೇಲ್ಯರ ಗುಂಪು ಗಿಲ್ಯಾದಿನಿಂದ ಬರುತ್ತಿತ್ತು. ಅವರ ಒಂಟೆಗಳು ಸಾಂಬ್ರಾಣಿ ಸುಗಂಧತೈಲ ರಕ್ತಬೋಳಗಳನ್ನು ಹೊರು ತ್ತಿದ್ದವು. ಅವರು ಅವುಗಳನ್ನು ಐಗುಪ್ತಕ್ಕೆ ತೆಗೆದು ಕೊಂಡು ಹೋಗುತ್ತಿದ್ದರು.

26. ಆಗ ಯೆಹೂದನು ತನ್ನ ಸಹೋದರರಿಗೆ–ನಾವು ನಮ್ಮ ಸಹೋದರನನ್ನು ಕೊಂದುಹಾಕಿ ಅವನ ರಕ್ತವನ್ನು ಮರೆಮಾಡುವದರಲ್ಲಿ ಲಾಭವೇನು?

27. ಬನ್ನಿರಿ, ಇಷ್ಮಾಯೇಲ್ಯರಿಗೆ ಅವನನ್ನು ಮಾರೋಣ. ನಾವು ಅವನ ಮೇಲೆ ಕೈಹಾಕಬಾರದು. ಯಾಕಂದರೆ ಅವನು ನಮ್ಮ ಸಹೋದರನೂ ನಮ್ಮ ಮಾಂಸವೂ ಆಗಿದ್ದಾನೆ ಅಂದನು. ಅದಕ್ಕೆ ಅವನ ಸಹೋದರರು ಒಪ್ಪಿದರು.

28. ಈ ಪ್ರಕಾರ (ಮಿದ್ಯಾನ್ಯರ ವರ್ತಕರು ಹಾದುಹೋಗುತ್ತಿದ್ದಾಗ) ಅವರು ಯೋಸೇಫನನ್ನು ತಗ್ಗಿನಿಂದ ಮೇಲೆತ್ತಿ ಇಷ್ಮಾಯೇಲ್ಯ ರಿಗೆ ಅವನನ್ನು ಇಪ್ಪತ್ತು ಬೆಳ್ಳಿಯ ನಾಣ್ಯಗಳಿಗೆ ಮಾರಿದರು, ಅವರು ಯೋಸೇಫನನ್ನು ಐಗುಪ್ತಕ್ಕೆ ಕರಕೊಂಡು ಹೋದರು.

29. ರೂಬೇನನು ತಗ್ಗಿನ ಬಳಿಗೆ ತಿರಿಗಿ ಬಂದಾಗ ಇಗೋ, ಯೋಸೇಫನು ತಗ್ಗಿನಲ್ಲಿ ಇಲ್ಲದ್ದರಿಂದ ತನ್ನ ವಸ್ತ್ರಗಳನ್ನು ಹರಿದು ಕೊಂಡನು.

30. ಅವನು ತನ್ನ ಸಹೋದರರ ಬಳಿಗೆ ತಿರಿಗಿಹೋಗಿ–ಆ ಮಗುವು ಇಲ್ಲವಲ್ಲಾ; ಹಾಗಾದರೆ ನಾನು ಎಲ್ಲಿಗೆ ಹೋಗಲಿ ಅಂದನು.

31. ಆಗ ಅವರು ಯೋಸೇಫನ ಅಂಗಿಯನ್ನು ತೆಗೆದುಕೊಂಡು ಮೇಕೆಯ ಮರಿಯನ್ನು ಕೊಯ್ದು ಆ ಅಂಗಿಯನ್ನು ರಕ್ತದಲ್ಲಿ ಅದ್ದಿ

32. ಆ ಬಣ್ಣದ ಅಂಗಿಯನ್ನು ಕಳುಹಿಸಿಕೊಟ್ಟರು. ಅವರು ಅದನ್ನು ಅವರ ತಂದೆಯ ಬಳಿಗೆ ತಂದು–ಇದು ನಮಗೆ ಸಿಕ್ಕಿತು. ಇದು ನಿನ್ನ ಮಗನ ಅಂಗಿಯೋ ಏನೋ ನೋಡು ಎಂದು ಹೇಳಿದರು.

33. ಯಾಕೋಬನು ಅದನ್ನು ಗುರುತು ಹಿಡಿದು–ಇದು ನನ್ನ ಮಗನ ಅಂಗಿ ಹೌದು; ದುಷ್ಟಮೃಗವು ಅವನನ್ನು ತಿಂದುಬಿಟ್ಟಿತು; ಯೋಸೇಫನು ನಿಸ್ಸಂದೇಹವಾಗಿ ತುಂಡು ತುಂಡಾಗಿ ಮಾಡಲ್ಪಟ್ಟಿದ್ದಾನೆ ಅಂದನು.

34. ಆಗ ಯಾಕೋಬನು ತನ್ನ ವಸ್ತ್ರಗಳನ್ನು ಹರಿದುಕೊಂಡು ತನ್ನ ನಡುವಿಗೆ ಗೋಣಿಯನ್ನು ಕಟ್ಟಿಕೊಂಡು ತನ್ನ ಮಗನಿಗೋಸ್ಕರ ಬಹುದಿನ ದುಃಖಪಟ್ಟನು.

35. ಅವನ ಕುಮಾರ ಕುಮಾರ್ತೆಯರೆಲ್ಲಾ ಅವನನ್ನು ಆದರಿಸಿದಾಗ್ಯೂ ಅವನು ಆದರಣೆ ಹೊಂದಲೊಲ್ಲದೆ–ನನ್ನ ಮಗನ ಬಳಿಗೆ ಸಮಾಧಿಗೆ ದುಃಖದಿಂದಲೇ ಇಳಿದು ಹೋಗು ವೆನು ಅಂದನು. ಹೀಗೆ ಅವನ ತಂದೆ ಅವನಿಗೋಸ್ಕರ ಅತ್ತನು.

36. ಇದಲ್ಲದೆ ಆ ಮಿದ್ಯಾನ್ಯರು ಯೋಸೇಫನನ್ನು ಐಗುಪ್ತದಲ್ಲಿ ಫರೋಹನ ಉದ್ಯೋಗಸ್ಥನಾದ ಪೋಟೀಫರನಿಗೆ ಮಾರಿದನು. ಅವನು ಮೈಗಾವಲಿನ ದಳವಾಯಿಯಾಗಿದ್ದನು.

About ಆದಿಕಾಂಡ Chapter 37

Read ಆದಿಕಾಂಡ Chapter 37 online from the Holy Bible. This chapter is part of the Book of ಆದಿಕಾಂಡ in the Old Testament. Continue reading with the chapter navigation above or explore the complete book.

Book Information

Book: ಆದಿಕಾಂಡ
Chapter: 37
Testament: Old Testament

How to Read this Chapter

Use the Previous and Next Chapter buttons to continue reading ಆದಿಕಾಂಡ. You can also adjust the font size for comfortable reading and browse other books of the Bible using the navigation links.

https://www.youtube.com/watch?v=rzsT_Q3KLzE

More Resources

Continue Reading the Bible

Continue reading ಆದಿಕಾಂಡ Chapter 37 and explore every book, chapter and verse of the Holy Bible. Use the navigation links above and below to move through the Scriptures with ease.

Frequently Asked Questions

What is ಆದಿಕಾಂಡ Chapter 37?

ಆದಿಕಾಂಡ Chapter 37 is part of the Book of ಆದಿಕಾಂಡ in the Holy Bible.

Can I read this chapter online?

Yes. You can read the complete ಆದಿಕಾಂಡ Chapter 37 online for free with easy chapter navigation.

More Chapters from ಆದಿಕಾಂಡ

  1. ಆದಿಕಾಂಡ Chapter 44
  2. ಆದಿಕಾಂಡ Chapter 38
  3. ಆದಿಕಾಂಡ Chapter 33
  4. ಆದಿಕಾಂಡ Chapter 18
  5. ಆದಿಕಾಂಡ Chapter 3
  6. ಆದಿಕಾಂಡ Chapter 50
  7. ಆದಿಕಾಂಡ Chapter 40

Explore More from ಹಳೆಯ ಒಡಂಬಡಿಕೆ

  1. ಯೆಹೋಶುವನು Chapter 13
  2. ವಿಮೋಚನಕಾಂಡ Chapter 20
  3. 1 ಸಮುವೇಲನು Chapter 8
  4. ಯೋಬನು Chapter 35
  5. 2 ಪೂರ್ವಕಾಲವೃತ್ತಾಂತ Chapter 31
  6. ಧರ್ಮೋಪದೇಶಕಾಂಡ Chapter 6
  7. ಧರ್ಮೋಪದೇಶಕಾಂಡ Chapter 15

Related Chapters & Readings

  1. ಕೀರ್ತನೆಗಳು Chapter 22
  2. 1 ಪೂರ್ವಕಾಲವೃತ್ತಾಂತ Chapter 22
  3. 2 ಪೂರ್ವಕಾಲವೃತ್ತಾಂತ Chapter 3
  4. ಅರಣ್ಯಕಾಂಡ Chapter 16
  5. ಆದಿಕಾಂಡ Chapter 5
  6. ಯೆರೆಮೀಯ Chapter 20
  7. ಆದಿಕಾಂಡ Chapter 21
Share Your Love

Leave a Reply

Your email address will not be published. Required fields are marked *