ಎಜ್ರನು Chapter 6

For English

Read ಎಜ್ರನು Chapter 6 Online

Read ಎಜ್ರನು Chapter 6 online from the Holy Bible. This chapter is part of the Book of ಎಜ್ರನು in the Old Testament. Browse every verse with easy chapter navigation, continue to the next chapter, or explore the complete Book of ಎಜ್ರನು and the Holy Bible online.

Choose a Chapter

ಎಜ್ರನು 6

ಅಧ್ಯಾಯ 6

1. ಆಗ ಅರಸನಾದ ದಾರ್ಯಾವೆಷನ ಅಪ್ಪ ಣೆಯ ಪ್ರಕಾರ ಅವರು ಪುಸ್ತಕ ಶಾಲೆ ಯಾಗಿದ್ದ ಬಾಬೆಲಿನ ಬೊಕ್ಕಸಗಳಲ್ಲಿ ಹುಡುಕಿದರು.

2. ಮೇದ್ಯರ ದೇಶದಲ್ಲಿರುವ ಅಹ್ಮೆತಾ ಪಟ್ಟಣದಲ್ಲಿ ಬರೆ ಯಲ್ಪಟ್ಟ ಜ್ಞಾಪಕಾರ್ಥದ ಒಂದು ಸುರಳಿಯು ಅದರಲ್ಲಿ ಸಿಕ್ಕಿತು.

3. ಅರಸನಾದ ಕೋರೆಷನ ಮೊದಲನೇ ವರುಷ ದಲ್ಲಿ ಅರಸನಾದ ಕೋರೆಷನು ಯೆರೂಸಲೇಮಿನಲ್ಲಿ ರುವ ದೇವರ ಆಲಯಕ್ಕೋಸ್ಕರ ಕೊಟ್ಟ ಅಪ್ಪಣೆ ಏನಂದರೆ–ಅವರು ಬಲಿಗಳನ್ನು ಅರ್ಪಿಸಿದ ಸ್ಥಳವಾದ ಆಲಯವು ಕಟ್ಟಲ್ಪಡಲಿ. ಅದರ ಅಸ್ತಿವಾರಗಳು ಬಲ ವಾಗಿ ಹಾಕಲ್ಪಡಲಿ; ಅದರ ಎತ್ತರ ಅರುವತ್ತು ಮೊಳ ಅದರ ಅಗಲ ಅರುವತ್ತು ಮೊಳ ಆಗಿರಲಿ;

4. ದೊಡ್ಡ ಕಲ್ಲುಗಳ ಮೂರು ಸಾಲುಗಳೂ ಹೊಸ ತೊಲೆಗಳ ಒಂದು ಸಾಲೂ ಇರಲಿ.

5. ಅದರ ಖರ್ಚು ಅರಮನೆ ಯಿಂದ ಕೊಡಲ್ಪಡಲಿ. ಇದಲ್ಲದೆ ನೆಬೂಕದ್ನೇಚ್ಚರನು ಯೆರೂಸಲೇಮಿನಲ್ಲಿರುವ ಮಂದಿರದಿಂದ ತೆಗೆದು ಕೊಂಡು ಬಾಬೆಲಿಗೆ ಒಯ್ದು ದೇವರ ಆಲಯದ ಬೆಳ್ಳಿ ಬಂಗಾರದ ಸಾಮಾನುಗಳನ್ನು ತಿರಿಗಿ ಯೆರೂಸಲೇಮಿನಲ್ಲಿರುವ ಮಂದಿರಕ್ಕೆ ತಕ್ಕೊಂಡು ಹೋಗಿ ದೇವರ ಆಲಯದೊಳಗೆ ಅದರದರ ಸ್ಥಳದಲ್ಲಿ ಇರಿಸಲಿ ಎಂಬದೇ.

6. ಆದಕಾರಣ ನದಿಯ ಆಚೆಯಲ್ಲಿರುವ ಅಧಿಪತಿ ಯಾದ ತತ್ತೆನೈಯನೇ, ಶೆತರ್ಬೋಜೆನೈಯೇ, ನದಿಯ ಆಚೆಯಲ್ಲಿರುವ ಅಪರ್ಸತ್ಕಾಯರಾದ ನಿಮ್ಮ ಜೊತೆ ಗಾರರು ಸಹ ಆ ಸ್ಥಳವನ್ನು ಬಿಟ್ಟು ದೂರವಾಗಿರ್ರಿ.

7. ದೇವರ ಆಲಯದ ಗೊಡವೆಯನ್ನು ನೀವು ಬಿಡಿರಿ. ಯೆಹೂದ್ಯರ ಅಧಿಪತಿಯೂ ಯೆಹೂದ್ಯರ ಹಿರಿಯರೂ ಅದರ ಸ್ಥಳದಲ್ಲಿ ದೇವರ ಆಲಯವನ್ನು ಕಟ್ಟಿಸಲಿ.

8. ಇದಲ್ಲದೆ ದೇವರ ಈ ಆಲಯವನ್ನು ಕಟ್ಟುವದಕ್ಕೆ ಯೆಹೂದ್ಯರ ಹಿರಿಯರಿಗೆ ನೀವು ಮಾಡತಕ್ಕದ್ದನ್ನು ಕುರಿತು ನಾನು ಕೊಡುವ ಅಪ್ಪಣೆ ಏನಂದರೆ–ಅವರು ಅಭ್ಯಂತರ ಮಾಡಲ್ಪಡದ ಹಾಗೆ ನದಿಯ ಆಚೆಯಲ್ಲಿಂದ ಬರುವ ಅರಸನ ಕಪ್ಪದಿಂದಲೇ ಈ ಮನುಷ್ಯರಿಗೆ ಖರ್ಚು ಕೊಡಲ್ಪಡಲಿ.

9. ಇದಲ್ಲದೆ ಅವರು ಪರ ಲೋಕದ ದೇವರಿಗೆ ಸುವಾಸನೆಯುಳ್ಳ ಬಲಿಗಳನ್ನು ಅರ್ಪಿಸುವ ಹಾಗೆಯೂ ಅರಸನ ಪ್ರಾಣಕ್ಕೋಸ್ಕರವೂ ಅವನ ಮಕ್ಕಳ ಪ್ರಾಣಕ್ಕೋಸ್ಕರವೂ ಪ್ರಾರ್ಥನೆ ಮಾಡುವ ಹಾಗೆಯೂ ಪರಲೋಕದ ದೇವರಿಗೆ ದಹನಬಲಿಗಳ ನಿಮಿತ್ತ

10. ಅವರಿಗೆ ಬೇಕಾದ ಹೋರಿ ಗಳೂ ಟಗರುಗಳೂ ಕುರಿಮರಿಗಳೂ ಗೋಧಿಯೂ ಉಪ್ಪೂ ದ್ರಾಕ್ಷಾರಸವೂ ಎಣ್ಣೆಯೂ ಪ್ರತಿದಿನ ತಪ್ಪದೆ ಯೆರೂಸಲೇಮಿನಲ್ಲಿರುವ ಯಾಜಕರ ನೇಮಕದ ಪ್ರಕಾರ ಅವರಿಗೆ ಕೊಡಲ್ಪಡಲಿ.

11. ನಾನು ಕೊಡುವ ಅಪ್ಪಣೆ ಏನಂದರೆ–ಯಾವನಾದರೂ ಈ ಮಾತನ್ನು ಬದಲು ಮಾಡಿದರೆ ಅವನ ಮನೆಯಿಂದ ಮರ ಕಿತ್ತು ನೆಡಲ್ಪಡಲಿ; ಅವನು ಅದರಲ್ಲಿ ಗಲ್ಲಿಗೆ ಹಾಕಲ್ಪಡಲಿ; ಅವನ ಮನೆಯು ಇದರ ನಿಮಿತ್ತ ತಿಪ್ಪೆ ಮಾಡಲ್ಪಡಲಿ.

12. ಇದಲ್ಲದೆ ತನ್ನ ನಾಮವನ್ನು ಇರಿಸಲು ಮಾಡಿದ ದೇವರು ಯೆರೂಸಲೇಮಿನಲ್ಲಿರುವ ದೇವರ ಈ ಆಲಯವನ್ನು ಬದಲು ಮಾಡುವದಕ್ಕೂ ಕೆಡಿಸು ವದಕ್ಕೂ ತಮ್ಮ ಕೈಯನ್ನು ಚಾಚುವ ಎಲ್ಲಾ ಅರಸುಗ ಳನ್ನೂ ಜನರನ್ನೂ ಆತನು ಕೆಡಿಸಲಿ. ದಾರ್ಯಾ ವೆಷನಾದ ನಾನು ಅಪ್ಪಣೆಕೊಟ್ಟಿದ್ದೇನೆ; ಅದು ತ್ವರೆ ಯಾಗಿ ಮಾಡಲ್ಪಡಲಿ ಎಂಬದು.

13. ಆಗ ನದಿಯ ಈಚೆಯಲ್ಲಿರುವ ಅಧಿಪತಿಯಾದ ತತ್ತೆನೈಯೂ ಶೆತರ್ಬೋಜೆನೈಯೂ ಅವರ ಜೊತೆ ಗಾರರೂ ಅರಸನಾದ ದಾರ್ಯಾವೆಷನು ಕಳುಹಿ ಸಿದ ಆಜ್ಞೆಯ ಪ್ರಕಾರ ತ್ವರೆಯಾಗಿ ಮಾಡಿದರು.

14. ಹಾಗೆಯೇ ಯೆಹೂದ್ಯರ ಹಿರಿಯರು ಕಟ್ಟಿಸಿ, ಪ್ರವಾದಿಗಳಾದ ಹಗ್ಗಾಯನೂ ಇದ್ದೋನನ ಮಗ ನಾದ ಜೆಕರೀಯನೂ ಪ್ರವಾದಿಸಿದ್ದರಿಂದ ಅಭಿವೃದ್ಧಿ ಯನ್ನು ಹೊಂದಿದರು. ಅವರು ಇಸ್ರಾಯೇಲ್‌ ದೇವರ ಅಪ್ಪಣೆಯ ಪ್ರಕಾರವೂ ಕೋರೆಷನು ದಾರ್ಯಾವೆಷನು ಪಾರಸಿಯ ಅರಸನಾದ ಅರ್ತಷಸ್ತನು ಎಂಬವರ ಅಪ್ಪಣೆಯ ಪ್ರಕಾರವೂ ಕಟ್ಟಿ ತೀರಿಸಿದರು.

15. ಅರಸ ನಾದ ದಾರ್ಯಾವೆಷನ ಆಳಿಕೆಯ ಆರನೇ ವರುಷದ ಅಡಾರ್‌ ತಿಂಗಳ ಮೂರನೇ ದಿವಸದಲ್ಲಿ ಈ ಆಲಯವು ಕಟ್ಟಿ ತೀರಿಸಲ್ಪಟ್ಟಿತು.

16. ಆಗ ಇಸ್ರಾಯೇಲ್ಯರ ಮಕ್ಕಳೂ ಯಾಜಕರೂ ಲೇವಿಯರೂ ಸೆರೆಯಿಂದ ಬಂದ ಮಿಕ್ಕಾ ದವರೂ ದೇವರ ಆಲಯವನ್ನು ಸಂತೋಷದಿಂದ ಪ್ರತಿಷ್ಠೆಮಾಡಿದರು.

17. ದೇವರ ಆಲಯದ ಪ್ರತಿಷ್ಠೆ ಗೋಸ್ಕರ ನೂರು ಹೋರಿಗಳನ್ನೂ ಇನ್ನೂರು ಟಗರು ಗಳನ್ನೂ ನಾನೂರು ಕುರಿಮರಿಗಳನ್ನೂ ಇಸ್ರಾಯೇಲ್‌ ಕುಲಗೋತ್ರಗಳ ಲೆಕ್ಕದ ಪ್ರಕಾರ ಸಮಸ್ತ ಇಸ್ರಾ ಯೇಲ್ಯರ ಪಾಪವನ್ನು ಕಳೆಯುವದಕ್ಕೋಸ್ಕರ ಹನ್ನೆರಡು ಮೇಕೆಯ ಹೋತಗಳನ್ನೂ ಬಲಿ ಅರ್ಪಿಸಿದರು.

18. ಮೋಶೆಯ ಪುಸ್ತಕದಲ್ಲಿ ಬರೆಯಲ್ಪಟ್ಟ ಹಾಗೆ ಯೆರೂ ಸಲೇಮಿನಲ್ಲಿ ವಾಸವಾಗಿರುವ ದೇವರ ಆರಾಧನೆ ಗೋಸ್ಕರ ಯಾಜಕರನ್ನು ಅವರ ಸರತಿಯ ಪ್ರಕಾರವೂ ಲೇವಿಯರನ್ನು ಅವರ ಸರತಿಯ ಪ್ರಕಾರವೂ ನೇಮಿಸಿದರು.

19. ಇದಲ್ಲದೆ ಸೆರೆಯ ಮಕ್ಕಳು ಮೊದಲನೇ ತಿಂಗಳಿನ ಹದಿನಾಲ್ಕನೇ ದಿವಸದಲ್ಲಿ ಪಸ್ಕವನ್ನು ಆಚರಿಸಿದರು.

20. ಯಾಜಕರೂ ಲೇವಿಯರ ಕೂಡ ಶುದ್ಧಮಾಡಿ ಕೊಂಡಿದ್ದರು; ಅವರೆಲ್ಲರು ಶುಚಿಯಾಗಿದ್ದು ಸೆರೆಯ ಸಮಸ್ತ ಮಕ್ಕಳಿಗೋಸ್ಕರವೂ ಯಾಜಕರಾದ ತಮ್ಮ ಸಹೋದರರಿಗೋಸ್ಕರವೂ ತಮಗೋಸ್ಕರವೂ ಪಸ್ಕ ವನ್ನು ವಧಿಸಿದರು.

21. ಹಾಗೆಯೇ ಸೆರೆಯಿಂದ ತಿರಿಗಿ ಬಂದ ಇಸ್ರಾಯೇಲ್‌ ಮಕ್ಕಳು ಇಸ್ರಾಯೇಲ್‌ ದೇವ ರಾಗಿರುವ ಕರ್ತನನ್ನು ಹುಡುಕಲು ದೇಶದ ಜನಾಂಗ ಗಳ ಅಶುಚಿಯಿಂದ ತಮ್ಮನ್ನು ಪ್ರತ್ಯೇಕಿಸಿ ಕೊಂಡು ಅವರ ಕಡೆಗೆ ಸೇರಿದ ಸಮಸ್ತರೂ ಅದನ್ನು ತಿಂದು ಹುಳಿ ಇಲ್ಲದ ರೊಟ್ಟಿಯ ಹಬ್ಬವನ್ನು ಸಂತೋಷದಿಂದ ಏಳು ದಿವಸ ಆಚರಿಸಿದರು.

22. ಇಸ್ರಾಯೇಲ್‌ ದೇವ ರಾಗಿರುವ ದೇವರ ಆಲಯದ ಕಾರ್ಯದಲ್ಲಿ ಅವರ ಕೈಗಳನ್ನು ಬಲಪಡಿಸುವದಕ್ಕೆ ಅಶ್ಶೂರ್‌ ದೇಶದ ಅರ ಸನ ಹೃದಯವನ್ನು ಅವರ ಕಡೆಗೆ ತಿರುಗಿಸಿದ್ದರಿಂದ ಕರ್ತನು ಅವರನ್ನು ಸಂತೋಷಪಡಿಸಿದನು.

About ಎಜ್ರನು Chapter 6

Read ಎಜ್ರನು Chapter 6 online from the Holy Bible. This chapter is part of the Book of ಎಜ್ರನು in the Old Testament. Continue reading with the chapter navigation above or explore the complete book.

Book Information

Book: ಎಜ್ರನು
Chapter: 6
Testament: Old Testament

How to Read this Chapter

Use the Previous and Next Chapter buttons to continue reading ಎಜ್ರನು. You can also adjust the font size for comfortable reading and browse other books of the Bible using the navigation links.

https://www.youtube.com/watch?v=rzsT_Q3KLzE

More Resources

Continue Reading the Bible

Continue reading ಎಜ್ರನು Chapter 6 and explore every book, chapter and verse of the Holy Bible. Use the navigation links above and below to move through the Scriptures with ease.

Frequently Asked Questions

What is ಎಜ್ರನು Chapter 6?

ಎಜ್ರನು Chapter 6 is part of the Book of ಎಜ್ರನು in the Holy Bible.

Can I read this chapter online?

Yes. You can read the complete ಎಜ್ರನು Chapter 6 online for free with easy chapter navigation.

More Chapters from ಎಜ್ರನು

  1. ಎಜ್ರನು Chapter 10
  2. ಎಜ್ರನು Chapter 9
  3. ಎಜ್ರನು Chapter 8
  4. ಎಜ್ರನು Chapter 5
  5. ಎಜ್ರನು Chapter 4
  6. ಎಜ್ರನು Chapter 3
  7. ಎಜ್ರನು Chapter 1

Explore More from ಹಳೆಯ ಒಡಂಬಡಿಕೆ

  1. ಚೆಫನ್ಯ Chapter 1
  2. ಆದಿಕಾಂಡ Chapter 32
  3. ವಿಮೋಚನಕಾಂಡ Chapter 23
  4. ಯೆಹೋಶುವನು Chapter 4
  5. ಪರಮಗೀತೆ Chapter 4
  6. ಯೆಹೋಶುವನು Chapter 11
  7. ಧರ್ಮೋಪದೇಶಕಾಂಡ Chapter 1

Related Chapters & Readings

  1. 1 ಸಮುವೇಲನು Chapter 22
  2. ಅರಣ್ಯಕಾಂಡ Chapter 12
  3. ಕೀರ್ತನೆಗಳು Chapter 48
  4. ಯೆಶಾಯ Chapter 27
  5. ರೋಮಾಪುರದವರಿಗೆ Chapter 9
  6. ಕೀರ್ತನೆಗಳು Chapter 1
  7. ಆದಿಕಾಂಡ Chapter 14
Share Your Love

Leave a Reply

Your email address will not be published. Required fields are marked *