Read ಮತ್ತಾಯನು Chapter 23 Online
Read ಮತ್ತಾಯನು Chapter 23 online from the Holy Bible. This chapter is part of the Book of ಮತ್ತಾಯನು in the New Testament. Browse every verse with easy chapter navigation, continue to the next chapter, or explore the complete Book of ಮತ್ತಾಯನು and the Holy Bible online.
Choose a Chapter
ಮತ್ತಾಯನು 23
ಅಧ್ಯಾಯ 23
1. ತರುವಾಯ ಯೇಸು ಜನಸಮೂಹಕ್ಕೂ ಶಿಷ್ಯರಿಗೂ ಹೇಳಿದ್ದೇನಂದರೆ —
2. ಶಾಸ್ತ್ರಿ ಗಳೂ ಫರಿಸಾಯರೂ ಮೋಶೆಯ ಸ್ಥಾನದಲ್ಲಿ ಕೂತಿ ದ್ದಾರೆ;
3. ಆದದರಿಂದ ಅವರು ನಿಮಗೆ ಹೇಳುವವು ಗಳನ್ನೆಲ್ಲಾ ಕೈಕೊಂಡು ನಡೆಯಿರಿ; ಅವರ ಕ್ರಿಯೆಗಳ ಪ್ರಕಾರ ನೀವು ಮಾಡಬೇಡಿರಿ; ಯಾಕಂದರೆ ಅವರು ಹೇಳುತ್ತಾರೆ, ಮಾಡುವದಿಲ್ಲ.
4. ಹೊರುವದಕ್ಕೆ ಅವರು ಭಾರವಾದ ಮತ್ತು ಕ್ರೂರವಾದ ಹೊರೆಗಳನ್ನು ಕಟ್ಟಿ ಜನರ ಹೆಗಲುಗಳ ಮೇಲೆ ಹೊರಿಸುತ್ತಾರೆ. ತಾವಾ ದರೋ ತಮ್ಮ ಬೆರಳುಗಳಲ್ಲಿ ಒಂದರಿಂದ ಲಾದರೂ ಅವುಗಳನ್ನು ಸರಿಸುವದಿಲ್ಲ.
5. ಆದರೆ ತಾವು ಮಾಡುವ ತಮ್ಮ ಕ್ರಿಯೆಗಳನ್ನೆಲ್ಲಾ ಜನರು ನೋಡುವಂತೆ ಮಾಡು ತ್ತಾರೆ. ಅವರು ತಮ್ಮ ಜ್ಞಾಪಕಪಟ್ಟಿಗಳನ್ನು ಅಗಲಮಾಡಿ ಉಡುಪುಗಳ ಅಂಚುಗಳನ್ನು ಉದ್ದ ಮಾಡುತ್ತಾ
6. ಔತಣಗಳಲ್ಲಿ ಪ್ರಥಮ ಸ್ಥಾನಗಳನ್ನೂ ಸಭಾಮಂದಿರ ಗಳಲ್ಲಿ ಮುಖ್ಯಸ್ಥಳಗಳನ್ನೂ
7. ಸಂತೆಯ ಸ್ಥಳಗಳಲ್ಲಿ ವಂದನೆಗಳನ್ನೂ ಮತ್ತು ಜನರಿಂದ–ಬೋಧಕರೇ, ಬೋಧಕರೇ ಎಂದು ಕರೆಯಲ್ಪಡುವದನ್ನೂ ಅವರು ಪ್ರೀತಿಸುತ್ತಾರೆ.
8. ಆದರೆ ನೀವು ಬೋಧಕರೆಂದು ಕರೆ ಯಲ್ಪಡಬೇಡಿರಿ. ಕ್ರಿಸ್ತನೊಬ್ಬನೇ ನಿಮ್ಮ ಬೋಧಕನು ಮತ್ತು ನೀವೆಲ್ಲರೂ ಸಹೋದರರು.
9. ಭೂಮಿಯ ಮೇಲೆ ಯಾರನ್ನೂ ನಿಮ್ಮ ತಂದೆಯೆಂದು ಕರೆಯಬೇಡಿರಿ; ಪರಲೋಕದಲ್ಲಿರುವಾತನೊಬ್ಬನೇ ನಿಮ್ಮ ತಂದೆ.
10. ನೀವು ಗುರುಗಳೆಂದು ಕರೆಯಲ್ಪಡಬೇಡಿರಿ; ಕ್ರಿಸ್ತ ನೊಬ್ಬನೇ ನಿಮ್ಮ ಗುರುವು.
11. ಆದರೆ ನಿಮ್ಮಲ್ಲಿ ಅತಿ ದೊಡ್ಡವನಾಗಿರುವವನು ನಿಮ್ಮ ಸೇವಕನಾಗಿರಬೇಕು.
12. ಯಾವನಾದರೂ ತನ್ನನ್ನು ಹೆಚ್ಚಿಸಿಕೊಂಡರೆ ಅವನು ತಗ್ಗಿಸಲ್ಪಡುವನು; ತನ್ನನ್ನು ತಗ್ಗಿಸಿಕೊಳ್ಳುವವನು ಹೆಚ್ಚಿಸಲ್ಪಡುವನು.
13. ಆದರೆ ಕಪಟಿಗಳಾದ ಶಾಸ್ತ್ರಿಗಳೇ, ಫರಿಸಾಯರೇ, ನಿಮಗೆ ಅಯ್ಯೋ! ನೀವು ಮನುಷ್ಯರ ಮುಂದೆ ಪರ ಲೋಕರಾಜ್ಯವನ್ನು ಮುಚ್ಚುತ್ತೀರಿ. ನೀವಂತೂ ಪ್ರವೇಶಿ ಸುವದಿಲ್ಲ, ಪ್ರವೇಶಿಸುವವರನ್ನೂ ನೀವು ಒಳಗೆ ಹೋಗಗೊಡಿಸುವದಿಲ್ಲ.
14. ಕಪಟಿಗಳಾದ ಶಾಸ್ತ್ರಿಗಳೇ, ಫರಿಸಾಯರೇ, ನಿಮಗೆ ಅಯ್ಯೋ! ನೀವು ವಿಧವೆಯರ ಮನೆಗಳನ್ನು ನುಂಗುತ್ತೀರಿ; ಮತ್ತು ನಟನೆಗಾಗಿ ಉದ್ದವಾದ ಪ್ರಾರ್ಥನೆಯನ್ನು ಮಾಡುತ್ತೀರಿ; ಆದದರಿಂದ ನೀವು ಹೆಚ್ಚಾದ ದಂಡನೆಯನ್ನು ಹೊಂದುವಿರಿ.
15. ಕಪಟಿಗಳಾದ ಫರಿಸಾಯರೇ, ಶಾಸ್ತ್ರಿಗಳೇ, ನಿಮಗೆ ಅಯ್ಯೋ! ಒಬ್ಬನನ್ನು ಮತಾಂತರ ಮಾಡು ವದಕ್ಕೆ ನೀವು ಸಮುದ್ರವನ್ನೂ ಭೂಮಿಯನ್ನೂ ಸುತ್ತುತ್ತೀರಿ; ಮತಾಂತರ ಮಾಡಿದ ಮೇಲೆ ಅವನನ್ನು ನಿಮಗಿಂತಲೂ ಎರಡರಷ್ಟು ನರಕದ ಮಗನನ್ನಾಗಿ ಮಾಡುತ್ತೀರಿ.
16. ಕುರುಡರಾದ ಮಾರ್ಗದರ್ಶಕರೇ, ನಿಮಗೆ ಅಯ್ಯೋ! ಒಬ್ಬನು ದೇವಾಲಯದ ಮೇಲೆ ಆಣೆಯಿಟ್ಟರೆ ಅದು ಏನೂ ಅಲ್ಲ ಅನ್ನುತ್ತೀರಿ; ಆದರೆ ಯಾವನಾದರೂ ದೇವಾಲಯದ ಚಿನ್ನದ ಮೇಲೆ ಆಣೆಯಿಟ್ಟರೆ ಅವನು ಸಾಲಗಾರನು ಎಂದು ಅನ್ನುತ್ತೀರಿ.
17. ಮೂರ್ಖರೇ, ಕುರುಡರೇ, ಯಾವದು ದೊಡ್ಡದು? ಚಿನ್ನವೋ ಇಲ್ಲವೆ ಚಿನ್ನವನ್ನು ಪಾವನ ಮಾಡುವ ದೇವಾಲಯವೋ?
18. ಯಾರಾದರೂ ಯಜ್ಞವೇದಿಯ ಮೇಲೆ ಆಣೆಯಿಡುವದಾದರೆ ಅದು ಏನೂ ಅಲ್ಲವೆಂದೂ ಯಾರಾದರೂ ಅದರಲ್ಲಿರುವ ಕಾಣಿಕೆಯ ಮೇಲೆ ಆಣೆಯಿಟ್ಟರೆ ಅವನು ಅಪರಾಧಿ ಯೆಂದೂ ಅನ್ನುತ್ತೀರಿ.
19. ಮೂರ್ಖರೇ, ಕುರುಡರೇ, ಯಾವದು ದೊಡ್ಡದು? ಕಾಣಿಕೆಯೋ ಇಲ್ಲವೆ ಕಾಣಿಕೆಯನ್ನು ಪಾವನಮಾಡುವ ಯಜ್ಞವೇದಿಯೋ?
20. ಆದದರಿಂದ ಯಜ್ಞವೇದಿಯ ಮೇಲೆ ಆಣೆಯಿಡು ವವನು ಅದರ ಮೇಲೆಯೂ ಅದರಲ್ಲಿರುವಂಥವುಗಳ ಮೇಲೆಯೂ ಆಣೆಯಿಡುವವನಾಗಿದ್ದಾನೆ.
21. ದೇವಾ ಲಯದ ಮೇಲೆ ಆಣೆಯಿಡುವವನು ಅದರ ಮೇಲೆ ಯೂ ಆದರಲ್ಲಿ ವಾಸಿಸುವಾತನ ಮೇಲೆಯೂ ಆಣೆ ಯಿಡುವವನಾಗಿದ್ದಾನೆ.
22. ಪರಲೋಕದ ಮೇಲೆ ಆಣೆ ಯಿಡುವವನು ದೇವರ ಸಿಂಹಾಸನದ ಮೇಲೆಯೂ ಅದರ ಮೇಲೆ ಕೂತಿರುವಾತನ ಮೇಲೆಯೂ ಆಣೆಯಿಡುವವನಾಗಿದ್ದಾನೆ.
23. ಕಪಟಿಗಳಾದ ಶಾಸ್ತ್ರಿಗಳೇ, ಫರಿಸಾಯರೇ, ನಿಮಗೆ ಅಯ್ಯೋ! ನೀವು ಮರುಗ ಸೋಪು ಜೀರಿಗೆ ಗಳಲ್ಲಿ ದಶಮ ಭಾಗವನ್ನು ಸಲ್ಲಿಸುತ್ತೀರಿ. ಆದರೆ ನ್ಯಾಯ ಪ್ರಮಾಣದ ತೀರ್ಪು ಕರುಣೆ ನಂಬಿಕೆ ಎಂಬ ಈ ಪ್ರಾಮುಖ್ಯವಾದವುಗಳನ್ನು ಬಿಟ್ಟುಬಿಟ್ಟಿದ್ದೀರಿ. ಇವುಗ ಳೊಂದಿಗೆ ಆ ಬೇರೆಯವುಗಳನೂ
24. ಕುರುಡ ಮಾರ್ಗದರ್ಶಕರಾದ ನೀವು ಸೊಳ್ಳೇ ಸೋಸುವವರು ಮತ್ತು ಒಂಟೇ ನುಂಗುವವರು.
25. ಕಪಟಿಗಳಾದ ಶಾಸ್ತ್ರಿಗಳೇ, ಫರಿಸಾಯರೇ, ನಿಮಗೆ ಅಯ್ಯೋ! ನೀವು ಪಾತ್ರೆಯ ಮತ್ತು ತಟ್ಟೆಯ ಹೊರಭಾಗವನ್ನು ಶುಚಿಮಾಡುತ್ತೀರಿ. ಆದರೆ ಅವು ಒಳಗೆ ಸುಲಿಗೆಯಿಂದಲೂ ದುರಾಶೆಯಿಂದಲೂ ತುಂಬಿರುತ್ತವೆ.
26. ಕುರುಡನಾದ ಫರಿಸಾಯನೇ, ಮೊದಲು ಪಾತ್ರೆಯ ಮತ್ತು ತಟ್ಟೆಯ ಒಳಗಿನ ಭಾಗ ವನ್ನು ಶುಚಿಮಾಡು; ಆಗ ಅವುಗಳ ಹೊರ ಭಾಗವೂ ಶುಚಿಯಾಗುವದು.
27. ಪಟಿಗಳಾದ ಶಾಸ್ತ್ರಿಗಳೇ, ಫರಿಸಾಯರೇ, ನಿಮಗೆ ಅಯ್ಯೋ! ಯಾಕಂದರೆ ನೀವು ಸುಣ್ಣಾ ಹಚ್ಚಿದ ಸಮಾಧಿ ಗಳಿಗೆ ಹೋಲಿಕೆಯಾಗಿದ್ದೀರಿ. ಅವು ಹೊರಗೆ ನಿಜಕ್ಕೂ ಅಂದವಾಗಿ ಕಾಣುತ್ತವೆ; ಆದರೆ ಒಳಗೆ ಸತ್ತವರ ಎಲುಬು ಗಳಿಂದಲೂ ಎಲ್ಲಾ ಅಶುದ್ಧತೆಯಿಂದಲೂ ತುಂಬಿರು ತ್ತವೆ.
28. ಅದರಂತೆಯೇ ನೀವು ಸಹ ಹೊರಗಡೆ ಮನುಷ್ಯರಿಗೆ ನೀತಿವಂತರಂತೆ ಕಾಣಿಸಿಕೊಳ್ಳುತ್ತೀರಿ; ಆದರೆ ನೀವು ಒಳಗೆ ಕಪಟದಿಂದಲೂ ದುಷ್ಟತನ ದಿಂದಲೂ ತುಂಬಿದವರಾಗಿದ್ದೀರಿ.
29. ಕಪಟಿಗಳಾದ ಶಾಸ್ತ್ರಿಗಳೇ, ಫರಿಸಾಯರೇ, ನಿಮಗೆ ಅಯ್ಯೋ! ಯಾಕಂದರೆ ನೀವು ಪ್ರವಾದಿಗಳ ಸಮಾಧಿಗಳನ್ನು ಕಟ್ಟಿ ನೀತಿವಂತರ ಸಮಾಧಿಗಳನ್ನು ಅಲಂಕರಿಸುತ್ತೀರಿ.
30. ಆದರೂ–ನಾವು ನಮ್ಮ ಪಿತೃಗಳ ದಿನಗಳಲ್ಲಿ ಇರುತ್ತಿದ್ದರೆ ಪ್ರವಾದಿಗಳ ರಕ್ತದಲ್ಲಿ ಅವರೊಂದಿಗೆ ಪಾಲುಗಾರರಾಗುತ್ತಿರಲಿಲ್ಲ ಎಂದು ಹೇಳುತ್ತೀರಿ.
31. ಆದದರಿಂದ ನೀವು ಆ ಪ್ರವಾದಿ ಗಳನ್ನು ಕೊಂದವರ ಮಕ್ಕಳೇ ಎಂದು ನಿಮಗೆ ನೀವೇ ಸಾಕ್ಷಿಗಳಾಗಿದ್ದೀರಿ.
32. ಹಾಗಾದರೆ ನಿಮ ಪಿತೃಗಳ ಅಳತೆಯನ್ನು ನೀವೇ ತುಂಬಿಸಿರಿ.
33. ಹಾವು ಗಳೇ, ಸರ್ಪಸಂತತಿಯವರೇ, ನೀವು ನರಕದಂಡನೆ ಯಿಂದ ಹೇಗೆ ತಪ್ಪಿಸಿಕೊಂಡೀರಿ?
34. ಆದದರಿಂದ ಇಗೋ, ನಾನು ಪ್ರವಾದಿಗಳನ್ನೂ ಜ್ಞಾನಿಗಳನ್ನೂ ಶಾಸ್ತ್ರಿಗಳನ್ನೂ ನಿಮ್ಮ ಬಳಿಗೆ ಕಳುಹಿ ಸುತ್ತೇನೆ. ಅವರಲ್ಲಿ ಕೆಲವರನ್ನು ನೀವು ಕೊಂದು ಶಿಲುಬೆಗೆ ಹಾಕುವಿರಿ; ಮತ್ತು ಕೆಲವರನ್ನು ನೀವು ನಿಮ್ಮ ಸಭಾಮಂದಿರಗಳಲ್ಲಿ ಕೊರಡೆಗಳಿಂದ ಹೊಡೆದು ಅವ ರನ್ನು ಪಟ್ಟಣದಿಂದ ಪಟ್ಟಣಕ್ಕೆ ಅಟ್ಟಿ ಹಿಂಸಿಸ
35. ಹೀಗೆ ನೀತಿವಂತನಾದ ಹೇಬೆಲನ ರಕ್ತ ಮೊದಲು ಗೊಂಡು ದೇವಾಲಯಕ್ಕೂ ಯಜ್ಞವೇದಿಗೂ ನಡುವೆ ನೀವು ಕೊಂದು ಹಾಕಿದ ಬರಕೀಯನ ಮಗನಾದ ಜಕರೀಯನ ರಕ್ತದವರೆಗೂ ಭೂಮಿಯ ಮೇಲೆ ಸುರಿಸಲ್ಪಟ್ಟ ಎಲ್ಲಾ ನೀತಿವಂತರ ರಕ್ತಾಪರಾಧವು ನಿಮ್ಮ ಮೇಲೆ ಬರುವದು.
36. ನಿಮಗೆ ನಿಜವಾಗಿ ಹೇಳು ತ್ತೇನೆ–ಇವೆಲ್ಲವುಗಳು ಈ ಸಂತತಿಯವರ ಮೇಲೆ ಬರುವವು.
37. ಓ ಯೆರೂಸಲೇಮೇ, ಯೆರೂಸಲೇಮೇ, ಪ್ರವಾದಿಗಳನ್ನು ಕೊಲ್ಲುವವಳೇ, ನಿನ್ನ ಬಳಿಗೆ ಕಳುಹಿಸ ಲ್ಪಟ್ಟವರನ್ನು ಕಲ್ಲೆಸೆಯುವವಳೇ, ಕೋಳಿಯು ಮರಿಗಳನ್ನು ತನ್ನ ರೆಕ್ಕೆಗಳ ಕೆಳಗೆ ಕೂಡಿಸುವಂತೆ ನಿನ್ನ ಮಕ್ಕಳನ್ನು ಕೂಡಿಸುವದಕ್ಕೆ ನನಗೆ ಎಷ್ಟೋ ಸಾರಿ ಮನಸ್ಸಿತ್ತು; ಆದರೆ ನಿನಗೆ ಮನ
38. ಇಗೋ, ನಿಮ್ಮ ಮನೆಯು ನಿಮಗೆ ಹಾಳಾದದ್ದಾಗಿ ಬಿಡಲ್ಪಡುವದು.
39. ಇಂದಿನಿಂದ ಕರ್ತನ ಹೆಸರಿನಲ್ಲಿ ಬರುವಾತನು ಧನ್ಯನು ಎಂದು ನೀವು ಹೇಳುವ ವರೆಗೆ ನೀವು ನನ್ನನ್ನು ನೋಡುವದೇ ಇಲ್ಲ ಎಂದು ನಾನು ನಿಮಗೆ ಹೇಳುತ್ತೇನೆ ಅಂದನು.
About ಮತ್ತಾಯನು Chapter 23
Read ಮತ್ತಾಯನು Chapter 23 online from the Holy Bible. This chapter is part of the Book of ಮತ್ತಾಯನು in the New Testament. Continue reading with the chapter navigation above or explore the complete book.
Book Information
Book: ಮತ್ತಾಯನು
Chapter: 23
Testament: New Testament
How to Read this Chapter
Use the Previous and Next Chapter buttons to continue reading ಮತ್ತಾಯನು. You can also adjust the font size for comfortable reading and browse other books of the Bible using the navigation links.
More Resources
Continue Reading the Bible
Continue reading ಮತ್ತಾಯನು Chapter 23 and explore every book, chapter and verse of the Holy Bible. Use the navigation links above and below to move through the Scriptures with ease.
Frequently Asked Questions
What is ಮತ್ತಾಯನು Chapter 23?
ಮತ್ತಾಯನು Chapter 23 is part of the Book of ಮತ್ತಾಯನು in the Holy Bible.
Can I read this chapter online?
Yes. You can read the complete ಮತ್ತಾಯನು Chapter 23 online for free with easy chapter navigation.
More Chapters from ಮತ್ತಾಯನು
- ಮತ್ತಾಯನು Chapter 4
- ಮತ್ತಾಯನು Chapter 6
- ಮತ್ತಾಯನು Chapter 15
- ಮತ್ತಾಯನು Chapter 2
- ಮತ್ತಾಯನು Chapter 28
- ಮತ್ತಾಯನು Chapter 22
- ಮತ್ತಾಯನು Chapter 20
Explore More from ಹೊಸ ಒಡಂಬಡಿಕೆ
- ಲೂಕನು Chapter 9
- ಕೊಲೊಸ್ಸೆಯವರಿಗೆ Chapter 2
- ಮತ್ತಾಯನು Chapter 4
- 1 ಥೆಸಲೊನೀಕದವರಿಗೆ Chapter 3
- ಮಾರ್ಕನು Chapter 12
- ಅಪೊಸ್ತಲರ ಕೃತ್ಯಗಳು Chapter 23
- ಮಾರ್ಕನು Chapter 1