ಯೆಶಾಯ Chapter 52

For English

Read ಯೆಶಾಯ Chapter 52 Online

Read ಯೆಶಾಯ Chapter 52 online from the Holy Bible. This chapter is part of the Book of ಯೆಶಾಯ in the Old Testament. Browse every verse with easy chapter navigation, continue to the next chapter, or explore the complete Book of ಯೆಶಾಯ and the Holy Bible online.

Choose a Chapter

ಯೆಶಾಯ 52

ಅಧ್ಯಾಯ 52

1. ಓ ಚೀಯೋನೇ, ಎಚ್ಚರವಾಗು, ಎಚ್ಚರವಾಗು, ನಿನ್ನ ಬಲವನ್ನು ಹೊಂದಿಕೋ, ಓ ಯೆರೂಸಲೇಮೇ, ಪರಿಶುದ್ಧ ಪಟ್ಟಣವೇ, ನಿನ್ನ ಸೌಂದರ್ಯವಾದ ಉಡುಪುಗಳನ್ನು ಧರಿಸಿಕೋ; ಯಾಕಂದರೆ ಇಂದಿನಿಂದ ಸುನ್ನತಿಯಿಲ್ಲದವರೂ ಅಶುದ್ಧರೂ ನಿನ್ನೊಳಗೆ ಬರುವದಿಲ್ಲ.

2. ಓ ಯೆರೂಸ ಲೇಮೇ, ಧೂಳನ್ನು ಝಾಡಿಸಿಕೋ; ಎದ್ದು ಕೂತು ಕೋ, ಓ ಸೆರೆಯಾದ ಚೀಯೋನ್‌ ಕುಮಾರಿಯೇ, ನಿನ್ನ ಕುತ್ತಿಗೆಯ ಪಾಶಗಳನ್ನು ಬಿಚ್ಚಿಕೋ.

3. ಕರ್ತನು ಹೀಗನ್ನುತ್ತಾನೆ–ನಿಮ್ಮನ್ನು ನೀವೇ ನಿಷ್ಫಲವಾಗಿ ಮಾಡಿಕೊಂಡಿರಿ; ಹಣವಿಲ್ಲದೇ ನೀವು ವಿಮೋಚಿಸಲ್ಪಡುವಿರಿ.

4. ಕರ್ತನಾದ ದೇವರು ಹೀಗ ನ್ನುತ್ತಾನೆ, ನನ್ನ ಜನರು ಪೂರ್ವದಲ್ಲಿ ಇಳುಕೊಳ್ಳುವ ದಕ್ಕೆ ಐಗುಪ್ತಕ್ಕೆ ಹೋದರು; ಅಶ್ಶೂರಿನವರು ಕಾರಣ ವಿಲ್ಲದೆ ಅವರನ್ನು ಹಿಂಸಿಸಿದರು.

5. ಹಾಗಾದರೆ ಈಗ ಕರ್ತನು ಹೇಳುವದೇನಂದರೆ ನನಗೆ ಇಲ್ಲಿ ಏನಿದೆ? ನನ್ನ ಜನರು ಏನೂ ಇಲ್ಲದೆ ಒಯ್ಯಲ್ಪಟ್ಟಿದ್ದಾರಲ್ಲಾ; ಆಳುವವರು ಅವರನ್ನು ಗೋಳಾಡಿಸುತ್ತಾರಲ್ಲಾ ಮತ್ತು ನನ್ನ ಹೆಸರು ಪ್ರತಿದಿನವೂ ಎಡೆಬಿಡದೇ ದೂಷಣೆಗೆ ಗುರಿಯಾಗಿದೆ ಎಂದು ಕರ್ತನು ಹೇಳುತ್ತಾನೆ.

6. ಆದದರಿಂದ ನನ್ನ ಜನರು ನನ್ನ ಹೆಸರನ್ನು ತಿಳಿದುಕೊಳ್ಳುವರು; ಹೀಗೆ ಆ ದಿನದಲ್ಲಿ ಮಾತನಾಡಿದಾತನು ನಾನೇ, ಇಗೋ, ಅದು ನಾನೇ ಎಂದು ಅವರು ಗ್ರಹಿಸುವರು.

7. ಒಳ್ಳೆಯ ಶುಭಸಮಾಚಾರವನ್ನು ತರುವವನ, ರಕ್ಷಣೆಯನ್ನು ಪ್ರಕಟಿಸುವವನ, ಚೀಯೋನಿಗೆ ನಿನ್ನ ದೇವರು ದೊರೆತನ ಮಾಡುತ್ತಾನೆ ಎಂದು ಹೇಳಿ, ಶುಭಸಮಾಚಾರವನ್ನು ತಂದು, ಸಮಾಧಾನವನ್ನು ಪ್ರಕಟಿಸಿ ಹೇಳುವಾತನ ಪಾದಗಳು ಪರ್ವತಗಳ ಮೇಲೆ ಎಷ್ಟೋ ಅಂದವಾಗಿವೆ!

8. ನಿನ್ನ ಕಾವಲುಗಾರರು ಸ್ವರವನ್ನೆತ್ತುವರು; ಆ ಸ್ವರದೊಂದಿಗೆ ಒಟ್ಟಾಗಿ ಅವರು ಹಾಡುವರು; ಕರ್ತನು ಚೀಯೋನನ್ನು ತಿರಿಗಿ ತರು ವಾಗ ಅವರು ಕಣ್ಣಲ್ಲಿ ಕಣ್ಣು ಇಟ್ಟು ನೋಡುವರು.

9. ಯೆರೂಸಲೇಮಿನ ಹಾಳಾದ ಸ್ಥಳಗಳೇ, ಆನಂದ ಧ್ವನಿಗೈಯಿರಿ ಒಟ್ಟಾಗಿ ಹಾಡಿರಿ; ಯಾಕಂದರೆ ಕರ್ತನು ತನ್ನ ಪ್ರಜೆಗಳನ್ನು ಆದರಿಸಿದ್ದಾನೆ, ಆತನು ಯೆರೂಸ ಲೇಮನ್ನು ವಿಮೋಚಿಸಿದ್ದಾನೆ.

10. ಕರ್ತನು ತನ್ನ ಪರಿ ಶುದ್ಧವಾದ ಬಾಹುವನ್ನು ಸಕಲ ಜನಾಂಗಗಳ ಕಣ್ಣು ಗಳಿಗೆ ತೋರಮಾಡಿದ್ದಾನೆ. ಭೂಮಿಯ ಅಂತ್ಯದವ ರೆಲ್ಲಾ ನಮ್ಮ ದೇವರ ರಕ್ಷಣೆಯನ್ನು ನೋಡುವರು.

11. ಹೊರಡಿರಿ, ಹೊರಡಿರಿ, ಅಲ್ಲಿಂದ ಹೊರಗೆ ಹೋಗಿರಿ, ಅಶುದ್ಧವಾದದ್ದನ್ನು ಮುಟ್ಟಬೇಡಿರಿ; ಅವಳ ಮಧ್ಯದಿಂದ ಹೊರಗೆ ಹೋಗಿರಿ; ಕರ್ತನ ಪಾತ್ರೆಗ ಳನ್ನು ಹೊರುವವರೇ, ನೀವು ಶುದ್ಧರಾಗಿರ್ರಿ.

12. ನೀವು ತ್ವರೆಯಾಗಿ ಹೋಗುವದಿಲ್ಲ; ಇಲ್ಲವೆ ಹಾರುವದ ರಿಂದಲೂ ಹೋಗುವದಿಲ್ಲ; ಯಾಕಂದರೆ ಕರ್ತನೇ ನಿಮ್ಮ ಮುಂದೆ ಹೋಗುವನು; ಇಸ್ರಾಯೇಲಿನ ದೇವರು ನಿಮ್ಮ ಬಹುಮಾನವಾಗಿರುವನು.

13. ಇಗೋ, ನನ್ನ ಸೇವಕನು ವಿವೇಕಿಯಾಗಿಕಾರ್ಯ ವನ್ನು ಸಾಧಿಸಿ ಅವನು ಉನ್ನತನಾಗಿ ಮೇಲಕ್ಕೇರಿ ಮಹೋನ್ನತನಾಗಿರುವನು.

14. ಅವನ ಮುಖವು ಮನುಷ್ಯರಿಗಿಂತಲೂ ಅವನ ಆಕಾರವು ನರಪುತ್ರರಿ ಗಿಂತಲೂ ಕುರೂಪವಾಗಿರುವದನ್ನು ನೋಡಿ ಹೇಗೆ ಆಶ್ಚರ್ಯಪಟ್ಟರೋ

15. ಹಾಗೆಯೇ ಅನೇಕ ಜನಾಂಗ ಗಳನ್ನು ಆತನು ಚಮಕಿತ ಮಾಡುವನು; ಅರಸರು ಆತನ ನಿಮಿತ್ತ ತಮ್ಮ ಬಾಯಿಗಳನ್ನು ಮುಚ್ಚಿಕೊಳ್ಳು ವರು; ಯಾಕಂದರೆ ಅವರಿಗೆ ತಿಳಿಸಲ್ಪಡದೇ ಇರುವ ದನ್ನು ಅವರು ನೋಡುವರು; ಕೇಳದೇ ಇರುವದನ್ನು ಗ್ರಹಿಸುವರು.

About ಯೆಶಾಯ Chapter 52

Read ಯೆಶಾಯ Chapter 52 online from the Holy Bible. This chapter is part of the Book of ಯೆಶಾಯ in the Old Testament. Continue reading with the chapter navigation above or explore the complete book.

Book Information

Book: ಯೆಶಾಯ
Chapter: 52
Testament: Old Testament

How to Read this Chapter

Use the Previous and Next Chapter buttons to continue reading ಯೆಶಾಯ. You can also adjust the font size for comfortable reading and browse other books of the Bible using the navigation links.

https://www.youtube.com/watch?v=rzsT_Q3KLzE

More Resources

Continue Reading the Bible

Continue reading ಯೆಶಾಯ Chapter 52 and explore every book, chapter and verse of the Holy Bible. Use the navigation links above and below to move through the Scriptures with ease.

Frequently Asked Questions

What is ಯೆಶಾಯ Chapter 52?

ಯೆಶಾಯ Chapter 52 is part of the Book of ಯೆಶಾಯ in the Holy Bible.

Can I read this chapter online?

Yes. You can read the complete ಯೆಶಾಯ Chapter 52 online for free with easy chapter navigation.

More Chapters from ಯೆಶಾಯ

  1. ಯೆಶಾಯ Chapter 55
  2. ಯೆಶಾಯ Chapter 50
  3. ಯೆಶಾಯ Chapter 34
  4. ಯೆಶಾಯ Chapter 21
  5. ಯೆಶಾಯ Chapter 60
  6. ಯೆಶಾಯ Chapter 56
  7. ಯೆಶಾಯ Chapter 31

Explore More from ಹಳೆಯ ಒಡಂಬಡಿಕೆ

  1. 1 ಸಮುವೇಲನು Chapter 16
  2. ಯೆರೆಮೀಯ Chapter 28
  3. ಯೋಬನು Chapter 42
  4. 2 ಸಮುವೇಲನು Chapter 5
  5. ಕೀರ್ತನೆಗಳು Chapter 10
  6. 2 ಪೂರ್ವಕಾಲವೃತ್ತಾಂತ Chapter 20
  7. ಅರಣ್ಯಕಾಂಡ Chapter 31

Related Chapters & Readings

  1. ಆದಿಕಾಂಡ Chapter 14
  2. ರೋಮಾಪುರದವರಿಗೆ Chapter 15
  3. ದಾನಿಯೇಲನು Chapter 6
  4. ಯೆಹೆಜ್ಕೇಲನು Chapter 47
  5. ಯೋಬನು Chapter 26
  6. ಇಬ್ರಿಯರಿಗೆ Chapter 12
  7. ನೀತಿವಚನಗಳು Chapter 31
Share Your Love

Leave a Reply

Your email address will not be published. Required fields are marked *