1 ಪೇತ್ರನು Chapter 1

For English

Read 1 ಪೇತ್ರನು Chapter 1 Online

Read 1 ಪೇತ್ರನು Chapter 1 online from the Holy Bible. This chapter is part of the Book of 1 ಪೇತ್ರನು in the New Testament. Browse every verse with easy chapter navigation, continue to the next chapter, or explore the complete Book of 1 ಪೇತ್ರನು and the Holy Bible online.

Choose a Chapter

1 ಪೇತ್ರನು 1

ಅಧ್ಯಾಯ 1

1. ಯೇಸು ಕ್ರಿಸ್ತನ ಅಪೊಸ್ತಲನಾದ ಪೇತ್ರನು ಪೊಂತ ಗಲಾತ್ಯ ಕಪ್ಪದೋಕ್ಯ ಆಸ್ಯ ಬಿಥೊನ್ಯ ಇವುಗಳಲ್ಲೆಲ್ಲಾ ಚದರಿರುವ ಪರದೇಶಸ್ಥರಿಗೆ

2. ಪವಿತ್ರಾತ್ಮನಿಂದ ಪ್ರತಿಷ್ಟಿಸಲ್ಪಟ್ಟವರಾಗಿ ವಿಧೇಯರಾ ಗುವದಕ್ಕೂ ಯೇಸು ಕ್ರಿಸ್ತನ ರಕ್ತದಿಂದ ಪ್ರೋಕ್ಷಿತರಾಗು ವದಕ್ಕೂ ತಂದೆಯಾದ ದೇವರ ಭವಿಷ್ಯದ್‌ ಜ್ಞಾನಾನು ಸಾರವಾಗಿ ಆರಿಸಿಕೊಳ್ಳಲ್ಪಟ್ಟವರಿಗೆ ಬರೆಯುವದೇ ನಂದರೆ–ನಿಮಗೆ ಕೃಪೆಯೂ ಶಾಂತಿಯೂ ಹೆಚ್ಚೆಚ್ಚಾಗಿ ದೊರೆಯಲಿ.

3. ನಮ್ಮ ಕರ್ತನಾದ ಯೇಸು ಕ್ರಿಸ್ತನ ತಂದೆಯೂ ದೇವರೂ ಆಗಿರುವಾತನಿಗೆ ಸ್ತೋತ್ರವಾಗಲಿ. ಆತನು ಯೇಸು ಕ್ರಿಸ್ತನನ್ನು ಸತ್ತವರೊಳಗಿಂದ ಎಬ್ಬಿಸಿದ್ದರಲ್ಲಿ ತನ್ನ ಮಹಾ ಕರುಣಾನುಸಾರವಾಗಿ ಜೀವಕರವಾದ ನಿರೀಕ್ಷೆಗೂ

4. ಲಯ ಕಳಂಕ ಕ್ಷಯಗಳಿಲ್ಲದ ಬಾಧ್ಯತೆಗೂ ನಮ್ಮನ್ನು ತಿರಿಗಿ ಹುಟ್ಟಿಸಿದ್ದಾನೆ. ಈ ಬಾಧ್ಯತೆಯು ನಿಮಗೋಸ್ಕರ ಪರಲೋಕದಲ್ಲಿ ಇಟ್ಟಿದೆ.

5. ಅಂತ್ಯ ಕಾಲದಲ್ಲಿ ಪ್ರಕಟವಾಗುವದಕ್ಕೆ ಸಿದ್ಧವಾಗಿರುವ ರಕ್ಷಣೆಗೆ ನಂಬಿಕೆಯ ಮುಖಾಂತರ ದೇವರು ನಿಮ್ಮನ್ನು ತನ್ನ ಬಲದಿಂದ ಕಾಯುತ್ತಾನೆ.

6. ನೀವು ಸದ್ಯಕ್ಕೆ ಸ್ವಲ್ಪಕಾಲ ಅಗತ್ಯವಿದ್ದಲ್ಲಿ ನಾನಾ ಕಷ್ಟಗಳಲ್ಲಿ ದುಃಖಿಸುವವ ರಾಗಿದ್ದರೂ ಬಹಳವಾಗಿ ಹರ್ಷಿಸುವವರಾಗಿದ್ದೀರಿ.

7. ಭಂಗಾರವು ನಾಶವಾಗುವಂಥದ್ದಾಗಿದ್ದರೂ ಅದನ್ನು ಬೆಂಕಿಯಿಂದ ಶೋಧಿಸುವದುಂಟಷ್ಟೆ. ಭಂಗಾರಕ್ಕಿಂತ ಬಹು ಅಮೂಲ್ಯವಾಗಿರುವ ನಿಮ್ಮ ನಂಬಿಕೆಯು ಈ ಕಷ್ಟಗಳಿಂದ ಶೋಧಿತವಾಗಿ ಯೇಸು ಕ್ರಿಸ್ತನು ಪ್ರತ್ಯಕ್ಷನಾಗುವಾಗ ನಿಮಗೆ ಕೀರ್ತಿ ಪ್ರಭಾವಮಾನ ಗಳನ್ನು ಉಂಟುಮಾಡುವದು.

8. ನೀವು ಆತನನ್ನು ನೋಡಲಿಲ್ಲವಾದರೂ ಆತನನ್ನು ಪ್ರೀತಿಸುತ್ತೀರಿ; ನೀವು ಈಗ ಆತನನ್ನು ಕಾಣದಿದ್ದರೂ ಆತನಲ್ಲಿ ನಂಬಿಕೆಯಿಟ್ಟು ಹೇಳಲಶಕ್ಯವಾದಂಥ ಪ್ರಭಾವವುಳ್ಳ ಸಂತೋಷದಿಂದ ಹರ್ಷಿಸುತ್ತೀರಿ.

9. ನಿಮ್ಮ ನಂಬಿಕೆಯ ಫಲವಾಗಿರುವ ಆತ್ಮಗಳ ರಕ್ಷಣೆಯನ್ನು ಹೊಂದುವವರಾಗಿದ್ದೀರಿ.

10. ನಿಮಗೆ ಬರಬೇಕಾಗಿದ್ದ ಕೃಪೆಯನ್ನು ಕುರಿತು ಮುಂತಿಳಿಸಿದ ಪ್ರವಾದಿಗಳು ಈ ರಕ್ಷಣೆಯ ವಿಷಯದಲ್ಲಿ ಸೂಕ್ಷ್ಮವಾಗಿ ವಿಚಾರಿಸಿ ಪರಿಶೋಧನೆ ಮಾಡಿದರು.

11. ತಮ್ಮಲ್ಲಿದ್ದ ಕ್ರಿಸ್ತನ ಆತ್ಮನು ಕ್ರಿಸ್ತನಿಗೆ ಬರಬೇಕಾದ ಬಾಧೆಗಳನ್ನೂ ಅವುಗಳ ತರುವಾಯ ಉಂಟಾಗುವ ಪ್ರಭಾವವನ್ನೂ ಮುಂದಾಗಿ ಸಾಕ್ಷೀಕರಿಸಿದಾಗ ಆತನು ಯಾವ ಕಾಲವನ್ನು ಇಲ್ಲವೆ ಎಂಥ ಕಾಲವನ್ನು ಸೂಚಿಸುವ ನೆಂಬದನ್ನು ಅವರು ಪರಿಶೋಧನೆ ಮಾಡಿದರು.

12. ಪರಲೋಕದಿಂದ ಕಳುಹಿಸಲ್ಪಟ್ಟ ಪರಿಶುದ್ಧಾತ್ಮನಿಂದ ನಿಮಗೆ ಸುವಾರ್ತೆಯನ್ನು ಸಾರಿದವರು ಈಗ ನಿಮಗೆ ತಿಳಿಸುವಂಥ ಮತ್ತು ದೂತರು ಕಣ್ಣಿಟ್ಟು ನೋಡಬೇಕೆಂದು ಅಪೇಕ್ಷಿಸುವಂಥ ಕಾರ್ಯಗಳಲ್ಲಿ ತಮಗೋಸ್ಕರವಲ್ಲ ನಮಗೋಸ್ಕರವೇ ಸೇವೆ ಮಾಡಿದರೆಂದು ಅವರಿಗೆ ಪ್ರಕಟವಾಯಿತು.

13. ಆದದರಿಂದ ನೀವು ಮನಸ್ಸಿನ ನಡುವನ್ನು ಕಟ್ಟಿ ಕೊಂಡು ಸ್ವಸ್ಥಚಿತ್ತರಾಗಿದ್ದು ಯೇಸು ಕ್ರಿಸ್ತನು ಪ್ರತ್ಯಕ್ಷ ನಾಗುವಾಗ ನಿಮಗೆ ದೊರಕುವ ಕೃಪೆಯ ಮೇಲೆ ನಿಮ್ಮ ನೀರಿಕ್ಷೆಯನ್ನು ಅಂತ್ಯದವರೆಗೆ ಇಡಿರಿ.

14. ನೀವು ಮುಂಚೆ ಅಜ್ಞಾನಿಗಳಾಗಿದ್ದಾಗ ನಿಮಗಿದ್ದ ದುರಾಶೆಗಳನ್ನು ಅನುಸರಿಸಿ ನಡೆದಂತೆ ಇನ್ನು ನಡೆಯುವವರಾಗಿರದೆ

15. ನಿಮ್ಮನ್ನು ಕರೆದಾತನು ಪರಿಶುದ್ಧನಾಗಿರುವ ಪ್ರಕಾರವೇ ನೀವೂ ವಿಧೇಯರಾದ ಮಕ್ಕಳಿಗೆ ತಕ್ಕಂತೆ ನಿಮ್ಮ ಎಲ್ಲಾ ನಡವಳಿಕೆಯಲ್ಲಿ ಪರಿಶುದ್ಧರಾಗಿರ್ರಿ.

16. ನಾನು ಪರಿಶುದ್ಧನಾಗಿರುವದರಿಂದ ನೀವೂ ಪರಿಶುದ್ಧ ರಾಗಿರಬೇಕು ಎಂದು ಬರೆದದೆಯಲ್ಲಾ.

17. ಪ್ರತಿಯೊಬ್ಬನ ಕೆಲಸವನ್ನು ನೋಡಿ ಪಕ್ಷಪಾತ ವಿಲ್ಲದೆ ತೀರ್ಪುಮಾಡುವಾತನನ್ನು ನೀವು ತಂದೆ ಯೆಂದು ಬೇಡಿಕೊಳ್ಳುವವರಾಗಿರಲಾಗಿ ನಿಮ್ಮ ಪ್ರವಾಸ ಕಾಲವನ್ನು ಭಯದಿಂದ ಕಳೆಯಿರಿ.

18. ನಿಮ್ಮ ತಂದೆ ಗಳಿಂದ ಕಲಿತುಕೊಂಡ ಸಂಪ್ರದಾಯದ ವ್ಯರ್ಥವಾದ ನಡವಳಿಕೆಯಿಂದ ನಿಮಗೆ ಬಿಡುಗಡೆಯಾದದ್ದು ನಶಿಸಿ ಹೋಗುವ ಬೆಳ್ಳಿ ಬಂಗಾರದಿಂದಲ್ಲ;

19. ಆದರೆ ಪೂರ್ಣಾಂಗವಾದ ನಿಷ್ಕಳಂಕ ಕುರಿಮರಿಯ ರಕ್ತ ದಿಂದಲೋ ಎಂಬಂತೆ ಕ್ರಿಸ್ತನ ಅಮೂಲ್ಯವಾದ ರಕ್ತದಿಂದಲೇ ಎಂದು ನೀವು ಬಲ್ಲಿರಲ್ಲವೇ.

20. ಆತನು ಜಗದುತ್ಪತ್ತಿಗೆ ಮೊದಲೇ ನೇಮಿಸಲ್ಪಟ್ಟು ಈ ಅಂತ್ಯ ಕಾಲಗಳಲ್ಲಿ ನಿಮಗಾಗಿ ಪ್ರತ್ಯಕ್ಷನಾದನು.

21. ಹೀಗಿರ ಲಾಗಿ ನಿಮ್ಮ ನಂಬಿಕೆಯೂ ನಿರೀಕ್ಷೆಯೂ ದೇವರಲ್ಲಿಯೇ ನೆಲೆಗೊಂಡಿರುವಂತೆ ಆತನನ್ನು ಸತ್ತವರೊಳಗಿಂದ ಎಬ್ಬಿಸಿ ಆತನಿಗೆ ಪ್ರಭಾವವನ್ನು ಕೊಟ್ಟ ದೇವರಲ್ಲಿ ನೀವು ಆತನ ಮೂಲಕ ವಿಶ್ವಾಸವಿಟ್ಟವರಾದಿರಷ್ಟೆ.

22. ನೀವು ಆತ್ಮನ ಮೂಲಕ ಸತ್ಯಕ್ಕೆ ವಿಧೇಯರಾಗಿದ್ದು ನಿಮ್ಮ ಆತ್ಮಗಳನ್ನು ಶುದ್ಧಮಾಡಿಕೊಂಡದ್ದರಿಂದ ನಿಷ್ಕಪಟ ವಾದ ಸಹೋದರ ಸ್ನೇಹವುಳ್ಳವರಾಗಿರತಕ್ಕದ್ದು. ಹೀಗಿರ ಲಾಗಿ ಒಬ್ಬರನ್ನೊಬ್ಬರು ಶುದ್ಧವಾದ ಹೃದಯದಿಂದಲೂ ಆಸಕ್ತಿಯಿಂದಲೂ ಪ್ರೀತಿಸಿರಿ.

23. ೀವು ತಿರಿಗಿ ಹುಟ್ಟಿದವರಾಗಿದ್ದೀರಲ್ಲಾ; ಆ ಜನ್ಮವು ನಾಶವಾಗುವ ಬೀಜದಿಂದ ಉಂಟಾದದ್ದಲ್ಲ. ನಾಶವಾಗದ ಬೀಜ ದಿಂದಲೇ ಉಂಟಾದದ್ದು ಅದು ದೇವರ ಸದಾ ಜೀವವುಳ್ಳ ವಾಕ್ಯದ ಮೂಲಕವಾಗಿ ಉಂಟಾಯಿತು.

24. ನರಜಾತಿಯೆಲ್ಲಾ ಹುಲ್ಲಿನ ಹಾಗಿದೆ. ಮನುಷ್ಯನ ಪ್ರಭಾವವೆಲ್ಲಾ ಹುಲ್ಲಿನ ಹೂವಿನಂತಿದೆ. ಹುಲ್ಲು ಒಣಗಿ ಹೋಗುವದು, ಅದರ ಹೂವು ಉದುರಿ ಹೋಗು ವದು;

25. ಕರ್ತನ ಮಾತೋ ಸದಾಕಾಲವೂ ಇರು ವದು. ಅದು ಯಾವದಂದರೆ ನಿಮಗೆ ಸಾರಲ್ಪಟ್ಟ ಸುವಾರ್ತಾವಾಕ್ಯವೇ.

About 1 ಪೇತ್ರನು Chapter 1

Read 1 ಪೇತ್ರನು Chapter 1 online from the Holy Bible. This chapter is part of the Book of 1 ಪೇತ್ರನು in the New Testament. Continue reading with the chapter navigation above or explore the complete book.

Book Information

Book: 1 ಪೇತ್ರನು
Chapter: 1
Testament: New Testament

How to Read this Chapter

Use the Previous and Next Chapter buttons to continue reading 1 ಪೇತ್ರನು. You can also adjust the font size for comfortable reading and browse other books of the Bible using the navigation links.

https://www.youtube.com/watch?v=rzsT_Q3KLzE

More Resources

Continue Reading the Bible

Continue reading 1 ಪೇತ್ರನು Chapter 1 and explore every book, chapter and verse of the Holy Bible. Use the navigation links above and below to move through the Scriptures with ease.

Frequently Asked Questions

What is 1 ಪೇತ್ರನು Chapter 1?

1 ಪೇತ್ರನು Chapter 1 is part of the Book of 1 ಪೇತ್ರನು in the Holy Bible.

Can I read this chapter online?

Yes. You can read the complete 1 ಪೇತ್ರನು Chapter 1 online for free with easy chapter navigation.

More Chapters from 1 ಪೇತ್ರನು

  1. 1 ಪೇತ್ರನು Chapter 3
  2. 1 ಪೇತ್ರನು Chapter 2
  3. 1 ಪೇತ್ರನು Chapter 4
  4. 1 ಪೇತ್ರನು Chapter 5

Explore More from ಹೊಸ ಒಡಂಬಡಿಕೆ

  1. ಗಲಾತ್ಯದವರಿಗೆ Chapter 2
  2. ಅಪೊಸ್ತಲರ ಕೃತ್ಯಗಳು Chapter 26
  3. ಮತ್ತಾಯನು Chapter 23
  4. 2 ಪೇತ್ರನು Chapter 2
  5. ಯೋಹಾನನು Chapter 11
  6. 2 ಪೇತ್ರನು Chapter 3
  7. ಪ್ರಕಟನೆ Chapter 6

Related Chapters & Readings

  1. ನಹೂಮ Chapter 1
  2. ಅರಣ್ಯಕಾಂಡ Chapter 34
  3. ಯೋಬನು Chapter 32
  4. ಹಗ್ಗಾಯ Chapter 1
  5. ಯೆಶಾಯ Chapter 10
  6. 2 ಪೇತ್ರನು Chapter 1
  7. ಅಪೊಸ್ತಲರ ಕೃತ್ಯಗಳು Chapter 6
Share Your Love

Leave a Reply

Your email address will not be published. Required fields are marked *