Read 1 ಅರಸುಗಳು Chapter 17 Online
Read 1 ಅರಸುಗಳು Chapter 17 online from the Holy Bible. This chapter is part of the Book of 1 ಅರಸುಗಳು in the Old Testament. Browse every verse with easy chapter navigation, continue to the next chapter, or explore the complete Book of 1 ಅರಸುಗಳು and the Holy Bible online.
Choose a Chapter
1 ಅರಸುಗಳು 17
ಅಧ್ಯಾಯ 17
1. ಗಿಲ್ಯಾದಿನ ನಿವಾಸಿಗಳಲ್ಲಿ ತಿಷ್ಬೀಯನಾದ ಎಲೀಯನು ಅಹಾಬನಿಗೆ–ಯಾವಾತನ ಸಮ್ಮುಖದಲ್ಲಿ ನಿಲ್ಲುತ್ತೇನೋ ಆ ಇಸ್ರಾಯೇಲಿನ ದೇವ ರಾದ ಕರ್ತನ ಜೀವದಾಣೆ, ನನ್ನ ಮಾತಿನ ಪ್ರಕಾರ ವಲ್ಲದೆ ಈ ವರ್ಷಗಳಲ್ಲಿ ಮಂಜೂ ಮಳೆಯೂ ಬೀಳು ವದಿಲ್ಲ ಅಂದನು.
2. ಕರ್ತನ ಮಾತು ಅವನಿಗೆ ಉಂಟಾಗಿ–ನೀನು ಈ ಸ್ಥಳವನ್ನು ಬಿಟ್ಟು ಪೂರ್ವ ದಿಕ್ಕಿಗೆ ಹೋಗಿ,
3. ಯೊರ್ದನಿಗೆ ಎದುರಿಗಿರುವ ಕೆರೀತ್ ಹಳ್ಳದ ಬಳಿ ಯಲ್ಲಿ ಅಡಗಿಕೊಂಡಿರು.
4. ನೀನು ಆ ಹಳ್ಳದ ನೀರನ್ನು ಕುಡಿಯುವಿ; ನಿನಗೆ ಆಹಾರವನ್ನು ತಂದು ಕೊಡಲು ನಾನು ಕಾಗೆಗಳಿಗೆ ಆಜ್ಞಾಪಿಸಿದ್ದೇನೆ ಎಂದು ಹೇಳಿದನು.
5. ಅವನು ಹೋಗಿ ಕರ್ತನ ಮಾತಿನ ಹಾಗೆಯೇ ಮಾಡಿದನು; ಅಂದರೆ ಅವನು ಹೋಗಿ ಯೊರ್ದನಿಗೆ ಎದುರಾಗಿರುವ ಕೆರೀತ್ ಹಳ್ಳದ ಬಳಿಯಲ್ಲಿ ವಾಸ ವಾಗಿದ್ದನು.
6. ಕಾಗೆಗಳು ಅವನಿಗೆ ಉದಯದಲ್ಲಿಯೂ ಸಾಯಂಕಾಲದಲ್ಲಿಯೂ ರೊಟ್ಟಿಯನ್ನೂ ಮಾಂಸವನ್ನೂ ತಕ್ಕೊಂಡು ಬಂದವು. ಅವನು ಆ ಹಳ್ಳದ ನೀರನ್ನು ಕುಡಿಯುತ್ತಿದ್ದನು.
7. ಸ್ವಲ್ಪ ಕಾಲವಾದ ಮೇಲೆ ಏನಾಯಿ ತಂದರೆ, ದೇಶದಲ್ಲಿ ಮಳೆ ಇಲ್ಲದ್ದರಿಂದ ಆ ಹಳ್ಳವು ಬತ್ತಿಹೋಯಿತು.
8. ಕರ್ತನ ವಾಕ್ಯವು ಅವನಿಗೆ ಉಂಟಾಗಿ–
9. ನೀನೆದ್ದು ಚೀದೋನಿಗೆ ಸೇರಿದ ಚಾರೆಪ್ತಾಕ್ಕೆ ಹೋಗಿ ಅಲ್ಲಿ ವಾಸವಾಗಿರು; ಇಗೋ, ನಿನ್ನನ್ನು ಸಂರಕ್ಷಣೆ ಮಾಡಲು ಅಲ್ಲಿರುವ ಒಬ್ಬ ವಿಧವೆಗೆ ಆಜ್ಞಾಪಿಸಿದ್ದೇನೆ ಅಂದನು.
10. ಹಾಗೆಯೆ ಅವನೆದ್ದು ಚಾರೆಪ್ತಾಕ್ಕೆ ಹೋಗಿ ಪಟ್ಟಣದ ಬಾಗಿಲ ಬಳಿಗೆ ಬಂದಾಗ ಇಗೋ, ಅಲ್ಲಿ ಒಬ್ಬ ವಿಧವೆಯು ಕಟ್ಟಿಗೆಗಳನ್ನು ಆರಿಸಿಕೊಳ್ಳುತ್ತಾ ಇದ್ದಳು. ಅವನು ಅವಳನ್ನು ಕರೆದು–ನೀನು ದಯಮಾಡಿ ಕುಡಿ ಯುವದಕ್ಕೆ ಪಾತ್ರೆಯಲ್ಲಿ ಸ್ವಲ್ಪ ನೀರನ್ನು ತಕ್ಕೊಂಡುಬಾ ಅಂದನು.
11. ಅವಳು ತಕ್ಕೊಂಡು ಬರಲು ಹೋಗು ತ್ತಿರುವಾಗ ಅವನು ಅವಳನ್ನು ಕರೆದು–ನೀನು ದಯ ಮಾಡಿ ನಿನ್ನ ಕೈಯಲ್ಲಿ ರೊಟ್ಟಿಯ ತುಂಡನ್ನು ನನಗೆ ತಕ್ಕೊಂಡು ಬಾ ಅಂದನು.
12. ಅದಕ್ಕೆ ಅವಳು–ನಿನ್ನ ದೇವರಾದ ಕರ್ತನ ಜೀವದಾಣೆ, ಮಡಕೆಯಲ್ಲಿ ಒಂದು ಹಿಡಿ ಹಿಟ್ಟೂ ತಂಬಿಗೆಯಲ್ಲಿ ಸ್ವಲ್ಪ ಎಣ್ಣೆಯ ಹೊರತಾಗಿ ನನಗೆ ಬೇರೇನೂ ಇಲ್ಲ. ಇಗೋ, ನಾನೂ ನನ್ನ ಕುಮಾರನೂ ಅದನ್ನು ತಿಂದು ಸತ್ತುಹೋಗುವ ಹಾಗೆ ಅದನ್ನು ನನಗೂ ಅವನಿಗೂ ಸಿದ್ಧ ಮಾಡಲು ಎರಡು ಕಟ್ಟಿಗೆಗಳನ್ನು ಕೂಡಿಸಿಕೊಂಡಿದ್ದೇನೆ ಅಂದಳು.
13. ಆಗ ಎಲೀಯನು ಅವಳಿಗೆ–ಭಯಪಡಬೇಡ; ನೀನು ಹೋಗಿ ನಿನ್ನ ಮಾತಿನ ಪ್ರಕಾರವೇ ಮಾಡು. ಆದರೆ ಮೊದಲು ಅದರಲ್ಲಿ ನನಗೆ ಒಂದು ಚಿಕ್ಕ ರೊಟ್ಟಿ ಮಾಡಿ, ನನ್ನ ಬಳಿಗೆ ತಕ್ಕೊಂಡು ಬಾ; ತರು ವಾಯ ನಿನಗೂ ನಿನ್ನ ಮಗನಿಗೂ ಸಿದ್ದಮಾಡಿಕೋ.
14. ಕರ್ತನು ಭೂಮಿಯ ಮೇಲೆ ಮಳೆಯನ್ನು ಕೊಡುವ ವರೆಗೂ ಮಡಕೆಯಲ್ಲಿರುವ ಹಿಟ್ಟು ತೀರುವದಿಲ್ಲ; ತಂಬಿಗೆಯಲ್ಲಿರುವ ಎಣ್ಣೆಯು ಮುಗಿಯುವದಿಲ್ಲ ಎಂದು ಇಸ್ರಾಯೇಲಿನ ದೇವರಾದ ಕರ್ತನು ಹೇಳು ತ್ತಾನೆ ಅಂದನು.
15. ಆಗ ಅವಳು ಹೋಗಿ ಎಲೀಯನ ಮಾತಿನ ಹಾಗೆಯೇ ಮಾಡಿ, ಅವಳೂ ಇವನೂ ಅವಳ ಮನೆಯವರೂ ಅನೇಕ ದಿವಸ ತಿಂದರು.
16. ಕರ್ತನು ಎಲೀಯನ ಮುಖಾಂತರ ಹೇಳಿದ ವಾಕ್ಯದ ಪ್ರಕಾರವೇ ಮಡಕೆಯಲ್ಲಿರುವ ಹಿಟ್ಟು ತೀರದೆ ತಂಬಿಗೆ ಯಲ್ಲಿರುವ ಎಣ್ಣೆಯು ಮುಗಿಯದೆ ಇತ್ತು.
17. ಇವುಗಳ ತರುವಾಯ ಏನಾಯಿತಂದರೆ, ಮನೆಯ ಯಜಮಾನಳಾದ ಆ ಸ್ತ್ರೀಯ ಮಗನು ರೋಗದಲ್ಲಿ ಬಿದ್ದು ಅವನಲ್ಲಿ ಶ್ವಾಸವು ನಿಂತುಹೋಗುವಂತೆ ಅವನ ರೋಗವು ಅಧಿಕವಾಗಿತ್ತು.
18. ಆಗ ಅವಳು ಎಲೀಯ ನಿಗೆ–ಓ ದೇವರ ಮನುಷ್ಯನೇ, ನನಗೂ ನಿನಗೂ ಏನು? ನನ್ನ ಅಕ್ರಮವನ್ನು ಜ್ಞಾಪಕಪಡಿಸುವ ದಕ್ಕೂ ನನ್ನ ಮಗನು ಸಾಯುವದಕ್ಕೂ ನನ್ನ ಬಳಿಗೆ ಬಂದಿಯೋ ಅಂದಳು.
19. ಅವನು ಅವಳಿಗೆ–ನಿನ್ನ ಮಗನನ್ನು ನನಗೆ ಕೊಡು ಎಂದು ಹೇಳಿ ಅವನನ್ನು ಅವಳ ಮಡಲಿನಿಂದ ಎತ್ತಿಕೊಂಡು ತಾನು ವಾಸ ವಾಗಿರುವ ಉಪ್ಪರಿಗೆಗೆ ಹೋಗಿ,
20. ತನ್ನ ಮಂಚದ ಮೇಲೆ ಮಲಗಿಸಿ–ನನ್ನ ದೇವರಾದ ಕರ್ತನೇ, ನಾನು ವಾಸವಾಗಿರುವ ವಿಧವೆಯ ಮಗನನ್ನು ಕೊಂದು ಹಾಕುವ ಈ ಕೇಡನ್ನು ಅವಳ ಮೇಲೆ ಬರಮಾಡಿದಿಯಲ್ಲಾ ಎಂದು ಕರ್ತನನ್ನು ಕೂಗಿ ಬೇಡಿದನು.
21. ಆಗ ಅವನು ಹುಡುಗನ ಮೇಲೆ ಮೂರು ಸಾರಿ ಬೋರ್ಲ ಬಿದ್ದುನನ್ನ ದೇವರಾದ ಓ ಕರ್ತನೇ, ಈ ಹುಡುಗನ ಪ್ರಾಣ ಅವನಲ್ಲಿ ತಿರಿಗಿ ಬರಲಿ ಎಂದು ಕರ್ತನನ್ನು ಕೂಗಿದನು.
22. ಕರ್ತನು ಎಲೀಯನ ಸ್ವರವನ್ನು ಕೇಳಿದ್ದರಿಂದ ಹುಡುಗನು ಬದುಕುವ ಹಾಗೆ ಅವನ ಪ್ರಾಣವು ಅವನೊಳಗೆ ತಿರಿಗಿ ಬಂತು.
23. ಆಗ ಎಲೀಯನು ಹುಡುಗನನ್ನು ಎತ್ತಿಕೊಂಡು ಉಪ್ಪರಿಗೆ ಯಿಂದ ಕೆಳಗಿರುವ ಮನೆಗೆ ತೆಗೆದುಕೊಂಡು ಬಂದು ಅವನನ್ನು ಅವನ ತಾಯಿಗೆ ಕೊಟ್ಟನು. ಅವನುನೋಡು, ನಿನ್ನ ಮಗನು ಜೀವದಿಂದಿದ್ದಾನೆಂದು ಎಲೀ ಯನು ಹೇಳಿದನು.
24. ಆಗ ಸ್ತ್ರೀಯು ಎಲೀಯನಿಗೆನೀನು ದೇವರ ಮನುಷ್ಯನೆಂದೂ ನಿನ್ನ ಬಾಯಿಯ ಲ್ಲಿರುವ ಕರ್ತನ ವಾಕ್ಯವು ನಿಜವೆಂದೂ ಇದರಿಂದ ಈಗ ತಿಳಿದಿದ್ದೇನೆ ಅಂದಳು.
About 1 ಅರಸುಗಳು Chapter 17
Read 1 ಅರಸುಗಳು Chapter 17 online from the Holy Bible. This chapter is part of the Book of 1 ಅರಸುಗಳು in the Old Testament. Continue reading with the chapter navigation above or explore the complete book.
Book Information
Book: 1 ಅರಸುಗಳು
Chapter: 17
Testament: Old Testament
How to Read this Chapter
Use the Previous and Next Chapter buttons to continue reading 1 ಅರಸುಗಳು. You can also adjust the font size for comfortable reading and browse other books of the Bible using the navigation links.
More Resources
Continue Reading the Bible
Continue reading 1 ಅರಸುಗಳು Chapter 17 and explore every book, chapter and verse of the Holy Bible. Use the navigation links above and below to move through the Scriptures with ease.
Frequently Asked Questions
What is 1 ಅರಸುಗಳು Chapter 17?
1 ಅರಸುಗಳು Chapter 17 is part of the Book of 1 ಅರಸುಗಳು in the Holy Bible.
Can I read this chapter online?
Yes. You can read the complete 1 ಅರಸುಗಳು Chapter 17 online for free with easy chapter navigation.