ಕೀರ್ತನೆಗಳು Chapter 10

For English

Read ಕೀರ್ತನೆಗಳು Chapter 10 Online

Read ಕೀರ್ತನೆಗಳು Chapter 10 online from the Holy Bible. This chapter is part of the Book of ಕೀರ್ತನೆಗಳು in the Old Testament. Browse every verse with easy chapter navigation, continue to the next chapter, or explore the complete Book of ಕೀರ್ತನೆಗಳು and the Holy Bible online.

Choose a Chapter

ಕೀರ್ತನೆಗಳು 10

ಅಧ್ಯಾಯ 10

1. ಓ ಕರ್ತನೇ, ನೀನು ದೂರದಲ್ಲಿ ನಿಂತು ಕೊಳ್ಳುವದೂ ಕಷ್ಟಕಾಲಗಳಲ್ಲಿ ನಿನ್ನನ್ನು ಮರೆಮಾಡಿಕೊಳ್ಳುವದೂ ಯಾಕೆ?

2. ದುಷ್ಟರು ಗರ್ವ ದಿಂದ ದೀನನನ್ನು ಹಿಂಸಿಸುತ್ತಾರೆ; ಅವರು ಕಲ್ಪಿಸಿದ ಯುಕ್ತಿಗಳಲ್ಲಿ ತಾವೇ ಹಿಡಿಯಲ್ಪಡಲಿ.

3. ದುಷ್ಟನು ತನ್ನ ಹೃದಯದ ಆಶೆಗೋಸ್ಕರ ಹೊಗಳಿಕೊಳ್ಳುತ್ತಾನೆ; ಕರ್ತನು ಅಸಹ್ಯಪಡುವ ಲೋಭಿಯನ್ನು ಅವನು ಆಶೀರ್ವದಿಸುತ್ತಾನೆ.

4. ದುಷ್ಟನು ತನ್ನ ಗರ್ವದ ಮುಖದಿಂದ ದೇವರನ್ನು ಹುಡುಕುವದಿಲ್ಲ; ಅವನ ಯೋಚನೆಗಳೆಲ್ಲಾ ದೇವ ರಿಲ್ಲದವುಗಳು.

5. ಅವನ ಮಾರ್ಗಗಳು ಯಾವಾಗಲೂ ವ್ಯಸನಕರವಾಗಿವೆ; ನಿನ್ನ ನ್ಯಾಯತೀರ್ಪುಗಳು ಅವನ ದೃಷ್ಟಿಗೆ ನಿಲುಕದಷ್ಟು ಉನ್ನತವಾಗಿವೆ; ತನ್ನ ವೈರಿಗಳೆ ಲ್ಲರ ಮುಂದೆ ಉಬ್ಬಿಕೊಳ್ಳುತ್ತಾನೆ.

6. ನಾನು ಕದಲು ವದಿಲ್ಲ; ನಾನು ಎಂದಿಗೂ ಕೇಡಿನಲ್ಲಿರುವದಿಲ್ಲ ಎಂದು ಅವನು ತನ್ನ ಹೃದಯದಲ್ಲಿ ಅಂದುಕೊಂಡಿದ್ದಾನೆ.

7. ಅವನ ಬಾಯಿ ಶಾಪದಿಂದಲೂ ಮೋಸದಿಂದಲೂ ವಂಚನೆಯಿಂದಲೂ ತುಂಬಿದೆ; ಅವನ ನಾಲಿಗೆಯ ಕೆಳಗೆ ಕೇಡೂ ವ್ಯರ್ಥತೆಯೂ ಇವೆ.

8. ಅವನು ಹೊಂಚು ಹಾಕುವ ಗ್ರಾಮಗಳ ಸ್ಥಳಗಳಲ್ಲಿ ಕೂತುಕೊಂಡು ಗುಪ್ತವಾದ ಸ್ಥಳಗಳಲ್ಲಿ ನಿರಪರಾಧಿಯನ್ನು ಕೊಲ್ಲು ತ್ತಾನೆ. ಅವನ ಕಣ್ಣುಗಳು ಗತಿಯಿಲ್ಲದವನನ್ನು ಹೊಂಚಿ ನೋಡು ತ್ತವೆ;

9. ಗವಿಯಲ್ಲಿರುವ ಸಿಂಹದ ಹಾಗೆ ಮರೆಯಲ್ಲಿ ಹೊಂಚು ಹಾಕುತ್ತಾನೆ; ಬಡವನನ್ನು ಹಿಡಿ ಯುವದಕ್ಕೆ ಹೊಂಚು ಹಾಕುತ್ತಾನೆ; ಬಡವನನ್ನು ತನ್ನ ಬಲೆಯಲ್ಲಿ ಎಳೆದು ಹಿಡಿಯುತ್ತಾನೆ.

10. ಅವನು ಕುಗ್ಗಿ ಬೊಗ್ಗುತ್ತಾನೆ; ಆದದರಿಂದ ಗತಿಯಿಲ್ಲದವರು ಅವನ ಬಲದಿಂದ ಬೀಳುತ್ತಾರೆ.

11. ದೇವರು ಮರೆತು ಬಿಟ್ಟಿ ದ್ದಾನೆ; ತನ್ನ ಮುಖವನ್ನು ಮರೆಮಾಡುತ್ತಾನೆ; ಆತನು ಎಂದೂ ನೋಡನು ಎಂದು ತನ್ನ ಹೃದಯದಲ್ಲಿ ಹೇಳಿಕೊಂಡಿದ್ದಾನೆ.

12. ಓ ಕರ್ತನೇ, ಏಳು; ಓ ದೇವ ರೇ, ನಿನ್ನ ಕೈ ಎತ್ತು, ದೀನರನ್ನು ಮರೆತು ಬಿಡಬೇಡ.

13. ದುಷ್ಟನು ದೇವರನ್ನು ಅಲಕ್ಷ್ಯಮಾಡುವದು ಯಾಕೆ? –ನೀನು ಅದನ್ನು ವಿಚಾರಿಸುವದಿಲ್ಲವೆಂದು ಅವನು ತನ್ನ ಹೃದಯದಲ್ಲಿ ಹೇಳಿಕೊಂಡಿದ್ದಾನೆ.

14. ನೀನು ಅದನ್ನು ನೋಡಿದ್ದೀ; ನಿನ್ನ ಕೈಯಿಂದ ಪ್ರತಿಫಲಕೊಡು ವದಕ್ಕೆ ಅವನ ಕುಯುಕ್ತಿಯನ್ನೂ ಹಗೆತನವನ್ನೂ ದೃಷ್ಟಿ ಸುತ್ತೀ. ಗತಿಯಿಲ್ಲದವನು ನಿನಗೆ ತನ್ನನ್ನು ಒಪ್ಪಿಸುತ್ತಾನೆ; ದಿಕ್ಕಿಲ್ಲದವನಿಗೆ ಸಹಾಯಕನು ನೀನೇ.

15. ದುಷ್ಟನ ಮತ್ತು ಕೆಡುಕನ ತೋಳನ್ನು ಮುರಿ; ಅದು ಸಿಕ್ಕದೆ ಹೋಗುವ ವರೆಗೂ ಅವನ ದುಷ್ಟತ್ವ ವನ್ನು ನೀನು ಹುಡುಕು.

16. ಕರ್ತನು ಯುಗ ಯುಗಾಂತರಗಳಿಗೂ ಅರಸನಾಗಿದ್ದಾನೆ; ಅನ್ಯಜನಾಂಗಗಳು ಆತನ ದೇಶದೊ ಳಗಿಂದ ನಾಶವಾದರು.

17. ಕರ್ತನೇ, ದೀನರ ಆಶೆ ಯನ್ನು ಕೇಳಿದ್ದೀ; ನೀನು ಅವರ ಹೃದಯವನ್ನು ಸಿದ್ಧ ಪಡಿಸಿ ಅವರ ಮೊರೆಗೆ ಕಿವಿಗೊಡುತ್ತೀ.

18. ಭೂಮಿಯ ಮನುಷ್ಯನು ಇನ್ನು ಭಯಪಡಿಸದ ಹಾಗೆ ದಿಕ್ಕಿಲ್ಲದ ವರಿಗೂ ಕುಗ್ಗಿದವರಿಗೂ ನ್ಯಾಯತೀರಿಸುವದಕ್ಕೆ ಕಿವಿಗೊಟ್ಟಿದ್ದೀ.

About ಕೀರ್ತನೆಗಳು Chapter 10

Read ಕೀರ್ತನೆಗಳು Chapter 10 online from the Holy Bible. This chapter is part of the Book of ಕೀರ್ತನೆಗಳು in the Old Testament. Continue reading with the chapter navigation above or explore the complete book.

Book Information

Book: ಕೀರ್ತನೆಗಳು
Chapter: 10
Testament: Old Testament

How to Read this Chapter

Use the Previous and Next Chapter buttons to continue reading ಕೀರ್ತನೆಗಳು. You can also adjust the font size for comfortable reading and browse other books of the Bible using the navigation links.

https://www.youtube.com/watch?v=rzsT_Q3KLzE

More Resources

Continue Reading the Bible

Continue reading ಕೀರ್ತನೆಗಳು Chapter 10 and explore every book, chapter and verse of the Holy Bible. Use the navigation links above and below to move through the Scriptures with ease.

Frequently Asked Questions

What is ಕೀರ್ತನೆಗಳು Chapter 10?

ಕೀರ್ತನೆಗಳು Chapter 10 is part of the Book of ಕೀರ್ತನೆಗಳು in the Holy Bible.

Can I read this chapter online?

Yes. You can read the complete ಕೀರ್ತನೆಗಳು Chapter 10 online for free with easy chapter navigation.

More Chapters from ಕೀರ್ತನೆಗಳು

  1. ಕೀರ್ತನೆಗಳು Chapter 147
  2. ಕೀರ್ತನೆಗಳು Chapter 118
  3. ಕೀರ್ತನೆಗಳು Chapter 54
  4. ಕೀರ್ತನೆಗಳು Chapter 5
  5. ಕೀರ್ತನೆಗಳು Chapter 144
  6. ಕೀರ್ತನೆಗಳು Chapter 138
  7. ಕೀರ್ತನೆಗಳು Chapter 125

Explore More from ಹಳೆಯ ಒಡಂಬಡಿಕೆ

  1. ಯೋಬನು Chapter 40
  2. 1 ಪೂರ್ವಕಾಲವೃತ್ತಾಂತ Chapter 14
  3. ಕೀರ್ತನೆಗಳು Chapter 2
  4. ಯೋಬನು Chapter 17
  5. ವಿಮೋಚನಕಾಂಡ Chapter 1
  6. 1 ಸಮುವೇಲನು Chapter 1
  7. ಕೀರ್ತನೆಗಳು Chapter 79

Related Chapters & Readings

  1. ಮೀಕ Chapter 6
  2. ಯೆರೆಮೀಯ Chapter 2
  3. ಯೆಶಾಯ Chapter 20
  4. ಮಾರ್ಕನು Chapter 5
  5. ಯೋಹಾನನು Chapter 5
  6. 2 ಪೂರ್ವಕಾಲವೃತ್ತಾಂತ Chapter 26
  7. ಕೀರ್ತನೆಗಳು Chapter 102
Share Your Love

Leave a Reply

Your email address will not be published. Required fields are marked *