ಕೀರ್ತನೆಗಳು Chapter 45

For English

Read ಕೀರ್ತನೆಗಳು Chapter 45 Online

Read ಕೀರ್ತನೆಗಳು Chapter 45 online from the Holy Bible. This chapter is part of the Book of ಕೀರ್ತನೆಗಳು in the Old Testament. Browse every verse with easy chapter navigation, continue to the next chapter, or explore the complete Book of ಕೀರ್ತನೆಗಳು and the Holy Bible online.

Choose a Chapter

ಕೀರ್ತನೆಗಳು 45

ಅಧ್ಯಾಯ 45

1. ನನ್ನ ಹೃದಯವು ಒಂದು ದಿವ್ಯ ವಿಷಯವನ್ನು ರಚಿಸುತ್ತಿರುವದು; ಅರಸನನ್ನು ಕುರಿತು ನಾನು ಮಾಡಿದವುಗಳನ್ನು ವಿವರಿಸುತ್ತೇನೆ; ನನ್ನ ನಾಲಿಗೆಯು ಬರೆಯುವವನ ಲೇಖನಿಯಂತೆ ಸಿದ್ಧವಾಗಿದೆ.

2. ನೀನು ಮನುಷ್ಯರ ಮಕ್ಕಳಿಗಿಂತ ಅತಿ ಸುಂದರ ನಾಗಿದ್ದೀ; ನಿನ್ನ ತುಟಿಗಳಲ್ಲಿ ಕೃಪೆಯು ಹೊಯಿದದೆ; ಆದದರಿಂದ ದೇವರು ಎಂದೆಂದಿಗೂ ನಿನ್ನನ್ನು ಆಶೀ ರ್ವದಿಸಿದ್ದಾನೆ.

3. ಓ ಪರಾಕ್ರಮಿಯೇ, ನಿನ್ನ ಮಹಿಮೆಯಿಂದಲೂ ಘನತೆಯಿಂದಲೂ ನಿನ್ನ ಕತ್ತಿಯನ್ನು ಸೊಂಟಕ್ಕೆ ಬಿಗಿ ದುಕೋ.

4. ಸತ್ಯತೆ ಸಾತ್ವಿಕತೆ ನೀತಿಗೋಸ್ಕರವೂ ನಿನ್ನ ಘನತೆಯಿಂದ ಅಭಿವೃದ್ಧಿಹೊಂದಿ ಸವಾರಿಮಾಡು; ನಿನ್ನ ಬಲಗೈ ಭಯಂಕರವಾದವುಗಳನ್ನು ನಿನಗೆ ಕಲಿಸುವದು.

5. ನಿನ್ನ ಹದವಾದ ಬಾಣಗಳು ಅರಸನ ಶತ್ರು ಗಳ ಹೃದಯದಲ್ಲಿ ನೆಟ್ಟಿವೆ; ಅವುಗಳಿಂದ ಜನರು ನಿನ್ನ ಕೆಳಗೆ ಬೀಳುತ್ತಾರೆ

6. ಓ ದೇವರೇ, ನಿನ್ನ ಸಿಂಹಾಸ ನವು ಎಂದೆಂದಿಗೂ ಇರುವದು; ನಿನ್ನ ರಾಜ್ಯದಂಡವು ನ್ಯಾಯದಂಡವಾಗಿದೆ.

7. ನೀನು ನೀತಿಯನ್ನು ಪ್ರೀತಿ ಮಾಡುತ್ತೀ; ದುಷ್ಟತ್ವವನ್ನು ಹಗೆಮಾಡುತ್ತೀ; ಆದದ ರಿಂದ ದೇವರು, ನಿನ್ನ ದೇವರು, ನಿನ್ನ ಸಂಗಡಿಗರಿಗಿಂತ ಹೆಚ್ಚಾಗಿ ನಿನ್ನನ್ನು ಆನಂದ ತೈಲದಿಂದ ಅಭಿಷೇಕಿಸಿ ದ್ದಾನೆ.

8. ನಿನ್ನ ವಸ್ತ್ರಗಳೆಲ್ಲಾ ಬೋಳವು ಅಗರು ದಾಲ್ಚಿನ್ನಿ ಇವುಗಳ ಸುವಾಸನೆಯಿಂದ ಇರುತ್ತವೆ. ಇವುಗಳಿಂದ ಅವರು ದಂತದ ಅರಮನೆಗಳೊಳಗಿಂದ ನಿನ್ನನ್ನು ಸಂತೋಷಪಡಿಸುತ್ತಾರೆ.

9. ಅರಸುಗಳ ಕುಮಾರ್ತೆ ಯರು ನಿನ್ನ ಗೌರವವುಳ್ಳ ಸ್ತ್ರೀಯರಲ್ಲಿ ಇದ್ದಾರೆ; ರಾಣಿಯು ಓಫಿರ್‌ ಬಂಗಾರವನ್ನು ಧರಿಸಿಕೊಂಡು ನಿನ್ನ ಬಲಗಡೆಯಲ್ಲಿ ನಿಂತಿದ್ದಾಳೆ.

10. ಓ ಮಗಳೇ, ಕಿವಿಗೊಟ್ಟು ಕೇಳಿ ಆಲೋಚಿಸು, ನಿನ್ನ ಸ್ವಂತ ಜನರನ್ನು ನಿನ್ನ ತಂದೆಯ ಮನೆಯನ್ನು ಮರೆತುಬಿಡು.

11. ಆಗ ಅರಸನು ನಿನ್ನ ಸೌಂದರ್ಯ ವನ್ನು ಬಹಳವಾಗಿ ಅಪೇಕ್ಷಿಸುವನು; ಆತನೇ ನಿನ್ನ ಕರ್ತನು; ಆತನನ್ನು ಆರಾಧಿಸು.

12. ತೂರಿನ ಮಗಳು ಕಾಣಿಕೆಯೊಂದಿಗೆ ಅಲ್ಲಿ ಇರುವಳು; ಅಂದರೆ ಪ್ರಜೆ ಗಳಲ್ಲಿ ಸ್ಥಿತಿವಂತರು ನಿನ್ನ ದಯೆಯನ್ನು ಕೋರುವರು.

13. ಅರಸನ ಮಗಳು ತನ್ನಲ್ಲಿ ಪೂರ್ಣ ಘನವುಳ್ಳವ ಳಾಗಿದ್ದಾಳೆ; ಅವಳ ವಸ್ತ್ರವು ಚಿನ್ನದಿಂದ ನೆಯಿದದೆ.

14. ಇವಳು ಕಸೂತಿ ವಸ್ತ್ರಗಳನ್ನುಟ್ಟು ಅರಸನ ಬಳಿಗೆ ತರಲ್ಪಡುತ್ತಾಳೆ; ಅವಳ ಹಿಂದೆ ಇರುವ ಕನ್ಯೆಯರಾದ ಅವಳ ಸಂಗಡಿಗರು ನಿನ್ನ ಬಳಿಗೆ ತರಲ್ಪಡುತ್ತಾರೆ.

15. ಸಂತೋಷದಿಂದಲೂ ಉಲ್ಲಾಸದಿಂದಲೂ ಅವರು ತರಲ್ಪಡುತ್ತಾರೆ; ಅವರು ಅರಸನ ಅರಮನೆಯೊಳಗೆ ಪ್ರವೇಶಿಸುವರು.

16. ನಿನ್ನ ತಂದೆಗಳಿಗೆ ಬದಲಾಗಿ ನಿನ್ನ ಮಕ್ಕಳು ಇರುವರು; ಅವರನ್ನು ಭೂಮಿಯ ಮೇಲೆಲ್ಲಾ ಪ್ರಧಾನರನ್ನಾಗಿ ಮಾಡುವಿ.

17. ತಲತಲಾಂತರಗಳ ಲ್ಲೆಲ್ಲಾ ನಿನ್ನ ಹೆಸರನ್ನು ನಾನು ಜ್ಞಾಪಕಪಡಿಸುವೆನು; ಆದದರಿಂದ ಜನರು ಯುಗಯುಗಾಂತರಗಳಿಗೂ ನಿನ್ನನ್ನು ಕೊಂಡಾಡುವರು.

About ಕೀರ್ತನೆಗಳು Chapter 45

Read ಕೀರ್ತನೆಗಳು Chapter 45 online from the Holy Bible. This chapter is part of the Book of ಕೀರ್ತನೆಗಳು in the Old Testament. Continue reading with the chapter navigation above or explore the complete book.

Book Information

Book: ಕೀರ್ತನೆಗಳು
Chapter: 45
Testament: Old Testament

How to Read this Chapter

Use the Previous and Next Chapter buttons to continue reading ಕೀರ್ತನೆಗಳು. You can also adjust the font size for comfortable reading and browse other books of the Bible using the navigation links.

https://www.youtube.com/watch?v=rzsT_Q3KLzE

More Resources

Continue Reading the Bible

Continue reading ಕೀರ್ತನೆಗಳು Chapter 45 and explore every book, chapter and verse of the Holy Bible. Use the navigation links above and below to move through the Scriptures with ease.

Frequently Asked Questions

What is ಕೀರ್ತನೆಗಳು Chapter 45?

ಕೀರ್ತನೆಗಳು Chapter 45 is part of the Book of ಕೀರ್ತನೆಗಳು in the Holy Bible.

Can I read this chapter online?

Yes. You can read the complete ಕೀರ್ತನೆಗಳು Chapter 45 online for free with easy chapter navigation.

More Chapters from ಕೀರ್ತನೆಗಳು

  1. ಕೀರ್ತನೆಗಳು Chapter 147
  2. ಕೀರ್ತನೆಗಳು Chapter 54
  3. ಕೀರ್ತನೆಗಳು Chapter 5
  4. ಕೀರ್ತನೆಗಳು Chapter 96
  5. ಕೀರ್ತನೆಗಳು Chapter 92
  6. ಕೀರ್ತನೆಗಳು Chapter 6
  7. ಕೀರ್ತನೆಗಳು Chapter 144

Explore More from ಹಳೆಯ ಒಡಂಬಡಿಕೆ

  1. ಕೀರ್ತನೆಗಳು Chapter 28
  2. 2 ಸಮುವೇಲನು Chapter 20
  3. ನಹೂಮ Chapter 2
  4. ಯೋಬನು Chapter 3
  5. ನ್ಯಾಯಸ್ಥಾಪಕರು Chapter 18
  6. ಕೀರ್ತನೆಗಳು Chapter 117
  7. ಯೆಶಾಯ Chapter 2

Related Chapters & Readings

  1. ಯೋಹಾನನು Chapter 9
  2. 2 ಕೊರಿಂಥದವರಿಗೆ Chapter 1
  3. ಪ್ರಲಾಪಗಳು Chapter 5
  4. ಯೋಬನು Chapter 21
  5. 2 ಪೇತ್ರನು Chapter 2
  6. ವಿಮೋಚನಕಾಂಡ Chapter 34
  7. ಯೋಬನು Chapter 31
Share Your Love

Leave a Reply

Your email address will not be published. Required fields are marked *