ಕೀರ್ತನೆಗಳು Chapter 66

For English

Read ಕೀರ್ತನೆಗಳು Chapter 66 Online

Read ಕೀರ್ತನೆಗಳು Chapter 66 online from the Holy Bible. This chapter is part of the Book of ಕೀರ್ತನೆಗಳು in the Old Testament. Browse every verse with easy chapter navigation, continue to the next chapter, or explore the complete Book of ಕೀರ್ತನೆಗಳು and the Holy Bible online.

Choose a Chapter

ಕೀರ್ತನೆಗಳು 66

ಅಧ್ಯಾಯ 66

1. ಸಮಸ್ತ ದೇಶಗಳೇ, ದೇವರಿಗೆ ಉತ್ಸಾಹ ಧ್ವನಿಗೈಯಿರಿ;

2. ಆತನ ಹೆಸರಿನ ಘನವನ್ನು ಕೀರ್ತಿಸಿರಿ; ಆತನ ಸ್ತೋತ್ರವನ್ನು ಘನವುಳ್ಳದ್ದಾಗಿ ಮಾಡಿರಿ.

3. ದೇವರಿಗೆ–ನಿನ್ನ ಕೆಲಸಗಳಿಂದ ನೀನು ಎಷ್ಟು ಭಯಂಕರನಾಗಿದ್ದೀ ಎಂದು ಹೇಳಿರಿ. ನಿನ್ನ ಮಹಾಬಲದ ನಿಮಿತ್ತ ನಿನ್ನ ಶತ್ರುಗಳು ತಾವೇ ನಿನಗೆ ಅಧೀನರಾಗುವರು;

4. ಭೂನಿವಾಸಿಗಳೆಲ್ಲ ನಿನ್ನನ್ನು ಹಾಡಿ ಆರಾಧಿಸಿ ನಿನ್ನ ನಾಮವನ್ನು ಕೀರ್ತಿಸುವರು. ಸೆಲಾ.

5. ಬನ್ನಿರಿ, ದೇವರ ಕಾರ್ಯಗಳನ್ನು ನೋಡಿರಿ; ಮನುಷ್ಯರ ಮಕ್ಕಳ ಕಡೆಗೆ ಆತನು ತನ್ನ ಕಾರ್ಯಗಳಲ್ಲಿ ಭಯಂಕರನಾಗಿದ್ದಾನೆ.

6. ಆತನು ಸಮುದ್ರವನ್ನು ಒಣ ಗಿದ ಭೂಮಿಗೆ ತಿರುಗಿಸಿದನು; ಅವರು ಕಾಲು ನಡಿಗೆ ಯಾಗಿ ಪ್ರವಾಹವನ್ನು ದಾಟಿದರು; ಅಲ್ಲಿ ನಾವು ಆತನಲ್ಲಿ ಸಂತೋಷಿಸಿದೆವು.

7. ಆತನು ತನ್ನ ಪರಾಕ್ರಮ ದಿಂದ ಎಂದೆಂದಿಗೂ ಆಳುವವನಾಗಿದ್ದಾನೆ; ಆತನ ಕಣ್ಣುಗಳು ಜನಾಂಗಗಳನ್ನು ದೃಷ್ಟಿಸುತ್ತವೆ; ಎದುರು ಬೀಳುವವರು ತಮ್ಮನ್ನು ತಾವೇ ಹೆಚ್ಚಿಸಿಕೊಳ್ಳದೆ ಇರಲಿ. ಸೆಲಾ.

8. ಓ ಜನರೇ, ನೀವು ದೇವರನ್ನು ಸ್ತುತಿಸಿರಿ; ಆತನ ಸ್ತೊತ್ರದ ಸ್ವರವು ಕೇಳಲ್ಪಡುವಂತೆ ಮಾಡಿರಿ.

9. ಆತನು ನಮ್ಮ ಪ್ರಾಣವನ್ನು ಜೀವದಲ್ಲಿಟ್ಟು ನಮ್ಮ ಪಾದಗಳನ್ನು ಕದಲುವಂತೆ ಬಿಡಲಿಲ್ಲ.

10. ಓ ದೇವರೇ, ನೀನು ನಮ್ಮನ್ನು ಶೋಧಿಸಿದ್ದೀ. ಬೆಳ್ಳಿಯನ್ನು ಪುಟಕ್ಕೆ ಹಾಕುವ ಪ್ರಕಾರ ನಮ್ಮನ್ನು ಶೋಧಿಸಿದ್ದೀ.

11. ನೀನು ಬಲೆಯೊಳಗೆ ನಮ್ಮನ್ನು ಬರಮಾಡಿದ್ದಲ್ಲದೆ ನಮ್ಮ ಸೊಂಟಗಳ ಮೇಲೆ ವ್ಯಥೆಯನ್ನು ಹೊರಿಸಿದ್ದೀ;

12. ಮನುಷ್ಯರು ನಮ್ಮ ತಲೆಗಳ ಮೇಲೆ ಸವಾರಿ ಮಾಡುವಂತೆ ಮಾಡಿದ್ದೀ. ನಾವು ಬೆಂಕಿಯಲ್ಲಿಯೂ ನೀರಿನಲ್ಲಿಯೂ ದಾಟಿದೆವು; ಆದರೆ ನೀನು ನಮ್ಮನ್ನು ಐಶ್ವರ್ಯದ ಸ್ಥಳಕ್ಕೆ ಬರಮಾಡಿದ್ದೀ;

13. ನಾನು ದಹನ ಬಲಿಗಳೊಂದಿಗೆ ನಿನ್ನ ಆಲಯಕ್ಕೆ ಹೋಗುವೆನು.

14. ನನ್ನ ಇಕ್ಕಟ್ಟಿನಲ್ಲಿ ತುಟಿಗಳು ಉಚ್ಚರಿಸಿದಂಥ, ಬಾಯಿ ನುಡಿದಂಥ, ಹರಕೆಗಳನ್ನು ನಾನು ನಿನಗೆ ಸಲ್ಲಿಸುವೆನು.

15. ಕೊಬ್ಬಿದ ದಹನಬಲಿಗಳನ್ನು ಟಗರುಗಳ ಧೂಪದ ಸಂಗಡ ನಿನಗೆ ಅರ್ಪಿಸುವೆನು; ಹೋತಗಳ ಸಂಗಡ ಎತ್ತುಗಳನ್ನು ಅರ್ಪಿಸುವೆನು. ಸೆಲಾ.

16. ದೇವರಿಗೆ ಭಯಪಡುವವರೆಲ್ಲರೇ, ಬನ್ನಿರಿ, ಕೇಳಿರಿ; ಆತನು ನನ್ನ ಪ್ರಾಣಕ್ಕೆ ಮಾಡಿದ್ದನ್ನು ಪ್ರಕಟಿ ಸುವೆನು.

17. ನನ್ನ ಬಾಯಿಂದ ಆತನನ್ನು ಕೂಗಿದೆನು; ನನ್ನ ನಾಲಿಗೆಯಿಂದ ಆತನನ್ನು ಉನ್ನತಪಡಿಸಿದೆನು.

18. ನನ್ನ ಹೃದಯದಲ್ಲಿ ಅಪರಾಧವನ್ನು ನಾನು ಆಶಿಸಿದ್ದರೆ ಕರ್ತನು ನನ್ನ ಪ್ರಾರ್ಥನೆಯನ್ನು ಕೇಳುವದಿಲ್ಲ.

19. ಆದರೆ ನಿಜವಾಗಿ ನನ್ನ ಪ್ರಾರ್ಥನೆಯನ್ನು ದೇವರು ಕೇಳಿದ್ದಾನಲ್ಲಾ! ಆತನು ನನ್ನ ಪ್ರಾರ್ಥನೆಯ ಸ್ವರವನ್ನು ಆಲೈಸಿದ್ದಾನಲ್ಲಾ!

20. ನನ್ನ ಪ್ರಾರ್ಥನೆಯನ್ನೂ ನನ್ನ ಬಳಿಯಿಂದ ತನ್ನ ಕರುಣೆಯನ್ನೂ ತೊಲಗಿಸದೆ ಇರುವ ದೇವರಿಗೆ ಸ್ತೋತ್ರವಾಗಲಿ.

About ಕೀರ್ತನೆಗಳು Chapter 66

Read ಕೀರ್ತನೆಗಳು Chapter 66 online from the Holy Bible. This chapter is part of the Book of ಕೀರ್ತನೆಗಳು in the Old Testament. Continue reading with the chapter navigation above or explore the complete book.

Book Information

Book: ಕೀರ್ತನೆಗಳು
Chapter: 66
Testament: Old Testament

How to Read this Chapter

Use the Previous and Next Chapter buttons to continue reading ಕೀರ್ತನೆಗಳು. You can also adjust the font size for comfortable reading and browse other books of the Bible using the navigation links.

https://www.youtube.com/watch?v=rzsT_Q3KLzE

More Resources

Continue Reading the Bible

Continue reading ಕೀರ್ತನೆಗಳು Chapter 66 and explore every book, chapter and verse of the Holy Bible. Use the navigation links above and below to move through the Scriptures with ease.

Frequently Asked Questions

What is ಕೀರ್ತನೆಗಳು Chapter 66?

ಕೀರ್ತನೆಗಳು Chapter 66 is part of the Book of ಕೀರ್ತನೆಗಳು in the Holy Bible.

Can I read this chapter online?

Yes. You can read the complete ಕೀರ್ತನೆಗಳು Chapter 66 online for free with easy chapter navigation.

More Chapters from ಕೀರ್ತನೆಗಳು

  1. ಕೀರ್ತನೆಗಳು Chapter 147
  2. ಕೀರ್ತನೆಗಳು Chapter 118
  3. ಕೀರ್ತನೆಗಳು Chapter 54
  4. ಕೀರ್ತನೆಗಳು Chapter 5
  5. ಕೀರ್ತನೆಗಳು Chapter 144
  6. ಕೀರ್ತನೆಗಳು Chapter 138
  7. ಕೀರ್ತನೆಗಳು Chapter 125

Explore More from ಹಳೆಯ ಒಡಂಬಡಿಕೆ

  1. ಯೆಹೆಜ್ಕೇಲನು Chapter 14
  2. ಯೆರೆಮೀಯ Chapter 4
  3. ಯಾಜಕಕಾಂಡ Chapter 20
  4. ಕೀರ್ತನೆಗಳು Chapter 55
  5. ಕೀರ್ತನೆಗಳು Chapter 62
  6. ಆದಿಕಾಂಡ Chapter 20
  7. ಯೆರೆಮೀಯ Chapter 20

Related Chapters & Readings

  1. ನೆಹೆಮಿಯಾ Chapter 13
  2. 1 ಪೂರ್ವಕಾಲವೃತ್ತಾಂತ Chapter 18
  3. ಯೆಹೋಶುವನು Chapter 23
  4. ಯೆರೆಮೀಯ Chapter 11
  5. 2 ಪೂರ್ವಕಾಲವೃತ್ತಾಂತ Chapter 29
  6. ಯೆರೆಮೀಯ Chapter 33
  7. ಯೋಬನು Chapter 42
Share Your Love

Leave a Reply

Your email address will not be published. Required fields are marked *