ಯೆಶಾಯ Chapter 5

For English

Read ಯೆಶಾಯ Chapter 5 Online

Read ಯೆಶಾಯ Chapter 5 online from the Holy Bible. This chapter is part of the Book of ಯೆಶಾಯ in the Old Testament. Browse every verse with easy chapter navigation, continue to the next chapter, or explore the complete Book of ಯೆಶಾಯ and the Holy Bible online.

Choose a Chapter

A+ A A-

ಯೆಶಾಯ 5

ಅಧ್ಯಾಯ 5

1. ನನ್ನ ಪ್ರಿಯನ ದ್ರಾಕ್ಷೇ ತೋಟದ ವಿಷಯವಾದ ಹಾಡನ್ನು ನನ್ನ ಅತಿ ಪ್ರಿಯನಿಗೆ ನಾನು ಹಾಡುವೆನು. ಫಲವತ್ತಾದ ಗುಡ್ಡದಲ್ಲಿ ನನ್ನ ಅತಿಪ್ರಿಯನಿಗೆ ದ್ರಾಕ್ಷೆಯ ತೋಟವಿದೆ.

2. ಅವನು ಅದಕ್ಕೆ ಬೇಲಿ ಹಾಕಿ, ಅದರೊಳಗಿಂದ ಕಲ್ಲುಗಳನ್ನು ಆರಿಸಿ ತೆಗೆದು ಹಾಕಿ ಒಳ್ಳೇ ದ್ರಾಕ್ಷೆಯನ್ನು ನೆಟ್ಟು, ಅದರ ಮಧ್ಯದಲ್ಲಿ ಒಂದು ಬುರುಜನ್ನು ಕಟ್ಟಿ, ದ್ರಾಕ್ಷೇ ತೊಟ್ಟಿಯನ್ನು ಕೊರೆಯಿಸಿ, ತೋಟವು ಒಳ್ಳೆ ದ್ರಾಕ್ಷೇ ಹಣ್ಣನ್ನು ಕೊಡುವದೆಂದು ಎದುರು ನೋಡು ತ್ತಿರಲು, ಅದು ಕಾಡುಹಣ್ಣನ್ನು ಬಿಟ್ಟಿತು.

3. ಓ ಯೆರೂಸಲೇಮಿನ ನಿವಾಸಿಗಳೇ, ಯೆಹೂದದ ಮನುಷ್ಯರೇ, ನನಗೂ ನನ್ನ ದ್ರಾಕ್ಷೆಯ ತೋಟಕ್ಕೂ ನ್ಯಾಯತೀರಿಸಿರಿ ಎಂದು ನಿಮ್ಮನ್ನು ಪ್ರಾರ್ಥಿಸುತ್ತೇನೆ.

4. ನನ್ನ ದ್ರಾಕ್ಷೇ ತೋಟದಲ್ಲಿ ನಾನು ಮಾಡಿದ್ದಕ್ಕಿಂತ ಇನ್ನೂ ಹೆಚ್ಚಾಗಿ ಅದಕ್ಕೆ ಏನು ಮಾಡಬೇಕಾಗಿತ್ತು? ಹೀಗಿರಲು ಅದು ಒಳ್ಳೇ ದ್ರಾಕ್ಷೇ ಫಲವನ್ನು ಫಲಿಸುವದೆಂದು ನಾನು ನಿರೀಕ್ಷಿಸುತ್ತಿರಲು ಅದು ಕಾಡುಹಣ್ಣನ್ನು ಕೊಟ್ಟಿದ್ದು ಯಾಕೆ?

5. ನನ್ನ ದ್ರಾಕ್ಷೇ ತೋಟಕ್ಕೆ ನಾನು ಮಾಡುವದು ಏನೆಂದು ನಾನು ನಿಮಗೆ ತಿಳಿಸುತ್ತೇನೆ. ನಾನು ಅದರ ಬೇಲಿ ಯನ್ನು ತೆಗೆದುಹಾಕುವೆನು. ಆಗ ಅದು ಮೇಯಲ್ಪಡು ವದು. ಅದರ ಗೋಡೆಯನ್ನು ಕೆಡವಿಬಿಡುವೆನು, ಆಗ ಅದು ತುಳಿದಾಟಕ್ಕೆ ಈಡಾಗುವದು.

6. ಅದನ್ನು ನಾನು ಹಾಳಾಗಲು ಬಿಡುವೆನು: ಅದನ್ನು ಯಾರೂ ಕುಡಿ ಕತ್ತರಿಸುವದಿಲ್ಲ; ಅಗೆಯುವದೂ ಇಲ್ಲ. ಆದರೆ ಅಲ್ಲಿ ಮುಳ್ಳುಪೊದೆಗಳು ಬೆಳೆಯುವವು; ಅಲ್ಲದೆ ಅದರ ಮೇಲೆ ಮಳೆ ಸುರಿಸಬಾರದೆಂದು ಮೋಡಗಳಿಗೆ ಆಜ್ಞಾ ಪಿಸುವೆನು.

7. ಸೈನ್ಯಗಳ ಕರ್ತನ ದ್ರಾಕ್ಷೇ ತೋಟವು ಇಸ್ರಾಯೇಲಿನ ಮನೆಯೇ, ಯೆಹೂದದ ಜನವೋ, ಆತನ ಇಷ್ಟದ ಗಿಡವೇ. ಆತನು ನ್ಯಾಯವನ್ನು ನಿರೀ ಕ್ಷಿಸಲು, ಇಗೋ, ಹಿಂಸೆಯೇ; ನೀತಿಯನ್ನು ನಿರೀಕ್ಷಿಸಲು ಗೋಳಾಟವೇ ಸಿಕ್ಕೀತು.

8. ಸ್ಥಳ ಮಿಗಿಸದೆ ನೀವು ಭೂಮಿಯ ಮಧ್ಯದಲ್ಲಿ ಒಂಟಿಯಾಗಿ ವಾಸಿಸುವಂತೆ ಮನೆಗೆ ಮನೆ ಕೂಡಿಸಿ ಹೊಲಕ್ಕೆ ಹೊಲ ಸೇರಿಸುವವರಿಗೆ ಅಯ್ಯೋ!

9. ಸೈನ್ಯ ಗಳ ಕರ್ತನು ನನ್ನ ಕಿವಿಗಳಲ್ಲಿ ಹೇಳುವದೇನಂದರೆ –ನಿಜವಾಗಿಯೂ ಅನೇಕ ದೊಡ್ಡದಾದವುಗಳೂ ಸೊಗಸಾದ ಅನೇಕ ಮನೆಗಳೂ ವಾಸಿಸುವವನು ಇಲ್ಲದೆ ಹಾಳುಬೀಳುವವು.

10. ಹೌದು, ಹತ್ತು ಎಕರೆ ದ್ರಾಕ್ಷೇ ತೋಟವು ಒಂದು ಬಾತು ಕೊಡುತ್ತದೆ. ಹೋಮೆರಷ್ಟು ಬೀಜ ಎಫವನ್ನು ಕೊಡುವದು.

11. ಮದ್ಯಪಾನವನ್ನು ಅತಿಯಾಗಿ ಕುಡಿಯಲು ಬೆಳ ಗಿನ ಜಾವದಲ್ಲಿ ಎದ್ದು ರಾತ್ರಿಯ ವರೆಗೂ ದ್ರಾಕ್ಷಾ ರಸದಿಂದ ಅಮಲೇರಿದವರಾಗಿ ಕಾಲ ಕಳೆಯುವವರಿಗೆ ಅಯ್ಯೋ!

12. ಅವರ ಹಬ್ಬಗಳಲ್ಲಿ ಕಿನ್ನರಿ, ವೀಣೆ, ದಮ್ಮಡಿ, ಕೊಳಲು ದ್ರಾಕ್ಷಾರಸವು ಇರುವವು; ಆದರೆ ಕರ್ತನ ಕೆಲಸವನ್ನು ಅವರು ಲಕ್ಷಿಸರು ಇಲ್ಲವೆ ಆತನ ಕೈಕೆಲಸವನ್ನು ಆಲೋಚಿಸುವದಿಲ್ಲ.

13. ಆದಕಾರಣ ನನ್ನ ಪ್ರಜೆಯು ಜ್ಞಾನಹೀನರಾದದರಿಂದ ಅವರು ಸೆರೆಗೆ ಹೋದರು; ಅವರ ಘನವಂತರು ಹಸಿಯು ವರು, ಹಾಗೆ ಜನಸಮೂಹವು ಬಾಯಾರಿಕೆಯಿಂದ ಒಣಗುವದು.

14. ಹೀಗಿರುವದರಿಂದ ಪಾತಾಳವು ತನಗೆ ತಾನೇ ದೊಡ್ಡದಾಗಿ ಮಿತಿಯಿಲ್ಲದಷ್ಟು ತನ್ನ ಬಾಯಿಯನ್ನು ತೆರೆಯಲು ಅವರ ಮಹಿಮೆ, ಸಮೂ ಹವು, ಕೋಲಾಹಲ, ಉಲ್ಲಾಸಪಡುವದು ಇವೆಲ್ಲವೂ ಅದರಲ್ಲಿ ಬೀಳುವವು.

15. ಮನುಷ್ಯನು ತಗ್ಗಿಸಲ್ಪಡು ವನು ಬಲಿಷ್ಠ ಮನುಷ್ಯನು ಕುಗ್ಗಿಸಲ್ಪಡುವನು. ಅಹಂಭಾವದ ಕಣ್ಣುಗಳು ಕಂಗೆಡುವವು.

16. ಆದರೆ ಸೈನ್ಯಗಳ ಕರ್ತನು ನ್ಯಾಯತೀರ್ಪಿನಲ್ಲಿ ಉನ್ನತನಾಗಿ ರುವನು ಪರಿಶುದ್ಧನಾದ ದೇವರು ನೀತಿಯಲ್ಲಿ ಪರಿಶುದ್ಧ ನೆನಿಸಿಕೊಳ್ಳುವನು.

17. ಆಗ ಕುರಿಮರಿಗಳು ತಮಗೆ ಮನಸ್ಸು ಬಂದ ಹಾಗೆ ಮೇಯುವವು, ಕೊಬ್ಬಿದವರ ಹಾಳಾದವುಗಳನ್ನು ಅನ್ಯರು ತಿನ್ನುವರು.

18. ವ್ಯರ್ಥವಾದ ಹಗ್ಗಗಳಿಂದ ಅಪರಾಧವನ್ನೂ ಬಂಡಿ ಹಗ್ಗದಿಂದಲೋ ಎಂಬಂತೆ ಪಾಪವನ್ನೂ ಎಳೆದು —

19. ನಾವು ಆತನ ಕೆಲಸವನ್ನು ನೋಡುವಂತೆ ಆತನು ತ್ವರೆಯಾಗಿ ಅದನ್ನು ಬೇಗನೆ ಮಾಡಲಿ; ನಾವು ಇಸ್ರಾ ಯೇಲಿನ ಪರಿಶುದ್ಧನ ಆಲೋಚನೆಯನ್ನು ತಿಳುಕೊ ಳ್ಳುವ ಹಾಗೆ ಅದು ಸವಿಾಪಿಸಿ ಬರಲಿ ಎಂದು ಹೇಳು ವವರಿಗೆ ಅಯ್ಯೋ!

20. ಕೇಡಿಗೆ ಮೇಲೆಂದೂ ಮೇಲಿಗೆ ಕೇಡೆಂದೂ ಕರೆದು ಕತ್ತಲೆಯನ್ನು ಬೆಳಕೆಂದೂ ಬೆಳಕನ್ನು ಕತ್ತಲೆ ಯೆಂದೂ ಕಹಿಯನ್ನು ಸಿಹಿಯೆಂದೂ ಸಿಹಿಯನ್ನು ಕಹಿ ಯೆಂದೂ ಎಣಿಸುವವರಿಗೆ ಅಯ್ಯೋ!

21. ತಮ್ಮ ಸ್ವಂತ ಕಣ್ಣುಗಳಲ್ಲಿ ಜ್ಞಾನಿಗಳೂ ಸ್ವಂತ ದೃಷ್ಟಿಯಲ್ಲಿ ವಿವೇಕಿಗಳೂ ಆಗಿರುವವರಿಗೆ ಅಯ್ಯೋ!

22. ದ್ರಾಕ್ಷಾರಸ ಕುಡಿಯುವದರಲ್ಲಿ ಶೂರರೂ ಮದ್ಯ ಮಿಶ್ರಣಗಳಲ್ಲಿ ಸಾಹಸಿಗಳೂ

23. ಲಂಚಕ್ಕೋಸ್ಕರ ದುಷ್ಟನನ್ನು ನೀತಿವಂತನೆಂದು ನಿರ್ಣಯಿಸಿ ಮತ್ತು ನೀತಿಯನ್ನು ನೀತಿವಂತನಿಂದ ತೆಗೆದುಹಾಕುವವರಿಗೂ ಅಯ್ಯೋ!

24. ಅವರು ಸೈನ್ಯಗಳ ಕರ್ತನ ನ್ಯಾಯ ಪ್ರಮಾಣವನ್ನು ನಿರಾಕರಿಸಿದ್ದರಿಂದಲೂ ಇಸ್ರಾಯೇ ಲಿನ ಪರಿಶುದ್ಧನ ವಾಕ್ಯವನ್ನು ಅಸಡ್ಡೆಮಾಡಿದ್ದ ರಿಂದಲೂ ಬೆಂಕಿಯು ಕೊಳ್ಳಿಯನ್ನು ನುಂಗಿಬಿಡುವ ಹಾಗೂ ಜ್ವಾಲೆಯು ಹೊಟ್ಟನ್ನು ಸುಟ್ಟುಬಿಡುವಂತೆಯೂ ಅದರ ಬೇರು ಕೊಳೆಯುವಂತೆಯೂ ಚಿಗುರು ಅವರ ಧೂಳಿನಂತೆಯೂ ತೂರಿಹೋಗುವವು.

25. ಆದಕಾರಣ ಕರ್ತನ ಕೋಪವು ಜನರಿಗೆ ವಿರೋ ಧವಾಗಿ ಉರಿಗೊಂಡು ಅವರ ಮೇಲೆ ತನ್ನ ಕೈಚಾಚಿ ಅವರನ್ನು ಹೊಡೆದಿದ್ದಾನೆ; ಗುಡ್ಡಗಳು ಕಂಪಿಸಿದವು. ಅವರ ಹೆಣಗಳು ಹರಿದು ಬೀದಿಗಳ ಮಧ್ಯದಲ್ಲಿ ಬಿದ್ದಿ ರುವವು. ಇಷ್ಟೆಲ್ಲಾ ಆದರೂ ಆತನ ಕೋಪವು ಹಿಂತಿರುಗದೆ ಇನ್ನೂ ಕೈಚಾಚಿಯೇ ಇದೆ.

26. ಆತನು ದೂರದ ಜನಾಂಗದವರಿಗೆ ಗುರುತಿಗಾಗಿ ಧ್ವಜವನ್ನೆತ್ತಿ, ಭೂಮಿಯ ಅಂಚಿನಿಂದ ಅವರಿಗೆ ಸಿಳ್ಳುಹಾಕುವನು. ಇಗೋ, ಅವರು ತ್ವರೆಯಾಗಿ ಫಕ್ಕನೆ ಬರುವರು;

27. ಅವರಲ್ಲಿ ಯಾರೂ ದಣಿದು ಮುಗ್ಗರಿಸರು; ಅಥವಾ ಅವರು ತೂಕಡಿಸುವದಿಲ್ಲ, ನಿದ್ರಿಸುವದಿಲ್ಲ, ಇಲ್ಲವೆ ಅವರ ನಡುಕಟ್ಟು ಬಿಚ್ಚಿಕೊಳ್ಳುವದಿಲ್ಲ. ಕೆರದ ಬಾರು ಹರಿಯುವದಿಲ್ಲ.

28. ಅವರ ಬಾಣಗಳು ಹದವಾಗಿವೆ, ಅವರ ಬಿಲ್ಲುಗಳು ಬೊಗ್ಗಿವೆ, ಅವರ ಕುದುರೆಗಳ ಗೊರಸುಗಳು ಕಲ್ಲಿನಂತೆಯೂ ಅವರ ಚಕ್ರಗಳು ಬಿರು ಗಾಳಿಯಂತೆಯೂ ರಭಸವಾಗಿವೆ.

29. ಅವರ ಘರ್ಜ ನೆಯು ಸಿಂಹದಂತೆ ಅದೆ. ಪ್ರಾಯದ ಸಿಂಹಗಳಂತೆ ಆರ್ಭಟಿಸುತ್ತಾರೆ; ಹೌದು, ಘರ್ಜಿಸುತ್ತಾ ಬೇಟೆ ಹಿಡಿದು ಭದ್ರವಾಗಿ ಹೊತ್ತುಕೊಂಡು ಹೋಗುತ್ತಾರೆ ಅದನ್ನು ಬಿಡಿಸುವವನು ಒಬ್ಬನೂ ಇಲ್ಲ.

30. ಆ ದಿನದಲ್ಲಿ ಅವರು ಸಮುದ್ರವು ಬೋರ್ಗರೆಯುವಂತೆ ಅವರ ಮೇಲೆ ಘರ್ಜಿಸುವರು; ಭೂಮಿಯನ್ನು ದೃಷ್ಟಿ ಸಿದರೆ ಅಂಧಕಾರವನ್ನೂ ದುಃಖವನ್ನೂ ನೋಡುವಿ. ಆಕಾಶಮಂಡಲದಲ್ಲಿ ಬೆಳಕು ಕತ್ತಲಾಗುವದು.

About ಯೆಶಾಯ Chapter 5

Read ಯೆಶಾಯ Chapter 5 online from the Holy Bible. This chapter is part of the Book of ಯೆಶಾಯ in the Old Testament. Continue reading with the chapter navigation above or explore the complete book.

Book Information

Book: ಯೆಶಾಯ
Chapter: 5
Testament: Old Testament

How to Read this Chapter

Use the Previous and Next Chapter buttons to continue reading ಯೆಶಾಯ. You can also adjust the font size for comfortable reading and browse other books of the Bible using the navigation links.

https://www.youtube.com/watch?v=rzsT_Q3KLzE

More Resources

Continue Reading the Bible

Continue reading ಯೆಶಾಯ Chapter 5 and explore every book, chapter and verse of the Holy Bible. Use the navigation links above and below to move through the Scriptures with ease.

Frequently Asked Questions

What is ಯೆಶಾಯ Chapter 5?

ಯೆಶಾಯ Chapter 5 is part of the Book of ಯೆಶಾಯ in the Holy Bible.

Can I read this chapter online?

Yes. You can read the complete ಯೆಶಾಯ Chapter 5 online for free with easy chapter navigation.

Share Your Love

Leave a Reply

Your email address will not be published. Required fields are marked *